
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೊನಾ ದೈನಂದಿನ ಪ್ರಕರಣದಲ್ಲಿ ಸೋಮವಾರವೂ ಹೆಚ್ಚಳವಾಗಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 2,792 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.ಒಟ್ಟು ೧೬ ಜನರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 9,89,804ಕ್ಕೆ ಏರಿಕೆಯಾಗಿದೆ.ಒಂದೇ ದಿನದಲ್ಲಿ 1,964 ಸೋಂಕಿತರು ಬಿಡುಗಡೆಯಾಗಿದ್ದು, 9,53,416 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಸೋಮವಾರ ಬೆಂಗಳೂರು ನಗರದಲ್ಲಿ 1,742 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಸೋಮವಾರ ಕೊರೋನಾ ಸೋಂಕಿಗೆ ಬೆಂಗಳೂರು ನಗರದ 9 ಜನರು, ಬೀದರಿನಲ್ಲಿ ಒಬ್ಬರು, ಹಾಸನದಲ್ಲಿ ಮೂವರು, ಮಂಡ್ಯದಲ್ಲಿ ಒಬ್ಬರು, ಮೈಸೂರಿನಲ್ಲಿ ಇಬ್ಬರು ಸೇರಿದಂತೆ 16 ಜನರು ಮೃತಪಟ್ಟಿದ್ದಾರೆ. ಇದರಿಂದಾಗಿ ಕಿಲ್ಲರ್ ಕೊರೋನಾಗೆ ಮೃತಪಟ್ಟವರ ಸಂಖ್ಯೆ 12,520ಕ್ಕೆ ಏರಿಕೆಯಾಗಿದೆ.




ನಿಮ್ಮ ಕಾಮೆಂಟ್ ಬರೆಯಿರಿ