ಏರ್ ಪೋರ್ಟ್ ನಲ್ಲೇ ನಟ, ‘ಬಿಗ್ ಬಾಸ್’ ಸ್ಪರ್ಧಿ ಆಜಾಜ್ ಖಾನ್‌ ಬಂಧನ

ಮುಂಬೈ: ಇಲ್ಲಿನ ಏರ್ ಪೋರ್ಟ್ ನಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ‘ಬಿಗ್ ಬಾಸ್’ ಸ್ಪರ್ಧಿ ಹಾಗೂ ನಟ ಆಜಾಜ್ ಖಾನ್ ಅವರನ್ನು ಬಂಧಿಸಿದ್ದಾರೆ.
ಡ್ರಗ್ಸ್ ಪ್ರಕರಣದ ತನಿಖೆ ಮುಂದುವರಿಸಿರುವ ಎನ್‌ಸಿಬಿ ಎರಡು ಸ್ಥಳಗಳಲ್ಲಿ ದಾಳಿ ಮಾಡಿದೆ. ‘ಬಿಗ್ ಬಾಸ್; ಸೀಸನ್ 7 ಖ್ಯಾತಿಯ ಆಜಾಜ್ ಖಾನ್ ಅವರನ್ನು ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಇವರು ರಾಜಸ್ಥಾನದಿಂದ ಮುಂಬೈ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಅಲ್ಲಿಯೇ ವಶಕ್ಕೆ ಪಡೆಯಲಾಗಿದೆ ಎಂದು ಹೇಳಲಾಗಿದೆ.
ಆಜಾಜ್ ಖಾನ್ ಗೆ ಸೇರಿದ ಅಂಧೇರಿ ಮತ್ತು ಲೋಖಂಡ್ ವಾಲಾದ ಕೆಲವು ಸ್ಥಳಗಳಲ್ಲಿ ದಾಳಿ ಮಾಡಲಾಗಿದೆ.ಡ್ರಗ್ಸ್ ಪ್ರಕರಣದಲ್ಲಿ ಈತನನ್ನು ಬಂಧಿಸಿರುವುದು ಇದೇ ಮೊದಲೇನಲ್ಲ. 2018 ರಲ್ಲಿಯೂ ನವಿ ಮುಂಬೈ ಪೊಲೀಸರು ಡ್ರಗ್ಸ್ ಪ್ರಕರಣದಲ್ಲಿ ಆತನನ್ನು ಬಂಧಿಸಿದ್ದರು. ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ 7 ರಲ್ಲಿ ಸ್ಪರ್ಧಿಯಾಗಿದ್ದ ಆಜಾಜ್ ಖಾನ್ ಸಿನಿಮಾ, ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement