ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ ಸಿಡಿ ಪ್ರಕರಣದ ಯುವತಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಸಿಡಿ ಪ್ರಕರಣಕ್ಕೆ ಸಂಬಂಸಿದಂತೆ ಸ್ವ ಇಚ್ಛಾ ಹೇಳಿಕೆ ನೀಡಲು ಕೋರ್ಟ್ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಸಂತ್ರಸ್ತ ಯುವತಿ ಮಂಗಳವಾರ (ಮಾ.೩೦) ಎಸಿಎಂಎಂ ನ್ಯಾಯಾಧೀಶರ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ.
ಕಳೆದ ೨೮ ದಿನಗಳ ಹೈಡ್ರಾಮಾದ ನಂತರ ಸಂತ್ರಸ್ತ ಯುವತಿ ವಸಂತ ನಗರದಲ್ಲಿರುವ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದ್ದಾಳೆ.
ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಮಂಗಳವಾರ ಮಧ್ಯಾಹ್ನ ೩ರ ಸುಮಾರಿಗೆ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರಾಗುತ್ತಾಳೆ ಎಂಬ ಹಿನ್ನೆಲೆಯಲ್ಲಿ ಮಾಧ್ಯಮದವರು ಕಾಯುತ್ತಿದ್ದರು. ಪೊಲೀಸರು ಸೂಕ್ತ ಭದ್ರತೆ ಒದಗಿಸಿದ್ದರು. ಸಂತ್ರಸ್ತ ಯುವತಿ ಪರ ವಕೀಲರಾದ ಜಗದೀಶ್‍ಕುಮಾರ್ ಮಾಧ್ಯಮದವರೊಂದಿಗೆ ಮಾತನಾಡಿ, ಈಗಾಗಲೇ ಯುವತಿ ನ್ಯಾಯಾಧೀಶರ ಎದುರು ಹಾಜರಾಗಿದ್ದಾರೆ, ಹೇಳಿಕೆ ನೀಡುತ್ತಿದ್ದಾರೆ ಎಂದು ಹೇಳಿದರು.
ಗೌಪ್ಯತೆ ಹಿನ್ನೆಲೆಯಲ್ಲಿ ನಾವು ಈಗಾಗಲೇ ಯುವತಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದೇವೆ ಎಂದು ಹೇಳಿದರು.
ಸಿಆರ್‍ಪಿಸಿ ನಿಯಮ-164ರಡಿ ಹೇಳಿಕೆ ದಾಖಲಿಸಲು ಎಸಿಎಂಎಂ ನ್ಯಾಯಾಧೀಶರಾದ ಬಾಲಗೋಪಾಲ್ ಅನುಮತಿ ನೀಡಿದ ಹಿನ್ನೆಲೆಯಲ್ಲಿ ನ್ಯಾಯಾಧೀಶರೆದುರು ಹಾಜರಾದ ಯುವತಿ ಹೇಳಿಕೆ ದಾಖಲಿಸಿದ್ದಾರೆ. ಎಸಿಎಂಎಂ ನ್ಯಾಯಾಲಯದಲ್ಲಿ ವ್ಯಾಪಕ ಬಂದೋಬಸ್ತ್ ಮಾಡಲಾಗಿತ್ತು. ನಂತರ ಸ್ಥಳಾಂತರಗೊಂಡ ಹಿನ್ನೆಲೆಯಲ್ಲಿ ವಸಂತನಗರದಲ್ಲಿ ಸೂಕ್ತ ಬಂದೋಬಸ್ತ್ ಮಾಡಲಾಯಿತು.

ಪ್ರಮುಖ ಸುದ್ದಿ :-   ಚಾಮರಾಜನಗರ : ಇಂಡಿಗನತ್ತ ಮತಗಟ್ಟೆ ಮೇಲೆ ಕಲ್ಲು ತೂರಾಟ, ಗಲಾಟೆ, ಮತಯಂತ್ರಕ್ಕೆ ಹಾನಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement