ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು: ಬೊಮ್ಮಾಯಿ 

ಕಲಬುರಗಿ: ಉಪ ಚುನಾವಣೆ ನಡೆಯುತ್ತಿರುವ ಬೆಳಗಾವಿ, ಮಸ್ಕಿ ಹಾಗೂ ಬಸವ ಕಲ್ಯಾಣದಲ್ಲಿ ಬಿಜೆಪಿ ಅಭ್ಯರ್ಥಿಗಳು ನಿಸ್ಸಂಶಯವಾಗಿ ಗೆಲವು ಸಾಧಿಸಲಿದ್ದಾರೆ. ಅದರಲ್ಲೂ ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಮಂಗಳಾ ಅಂಗಡಿ ಅವರು ಲಕ್ಷಕ್ಕೂ ಅಧಿಕ ಮತಗಳಿಂದ ಜಯಗಳಿಸಲಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಬಸವ ಕಲ್ಯಾಣಕ್ಕೆ ತೆರಳಲು ಬೆಂಗಳೂರಿನಿಂದ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವ ಕಲ್ಯಾಣದಲ್ಲಿ ಆಕಾಂಕ್ಷಿಗಳು ಹೆಚ್ಚಿರುವುದರಿಂದ ಅಸಮಾಧಾನಗಳು ಉಂಟಾಗುವುದು ಸಹಜ. ಟಿಕೆಟ್ ಸಿಗದೇ ಇರುವುದಕ್ಕೆ ಮುನಿಸಿಕೊಂಡಿರುವ ಮಲ್ಲಿಕಾರ್ಜುನ ಖೂಬಾ ಅವರೊಂದಿಗೆ ತಾವು ಮಾತನಾಡುತ್ತೇನೆ ಎಂದು ಹೇಳಿದರು.
ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಂಗ್ರೆಸ್ ಆಡಳಿತಕ್ಕಿಂತಲೂ ಅತ್ಯುತ್ತಮವಾಗಿದೆ. ಕಾಂಗ್ರೆಸ್ ಪಕ್ಷದವರು ಅನಗತ್ಯವಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದು ದೂರಿದರು. ರಾಜ್ಯದಲ್ಲಿ 52 ಪೋಲಿಸ್ ಠಾಣೆಗಳನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ ಎಂದು ಸಹ ತಿಳಿಸಿದರು

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement