ಸಿಡಿ ಯುವತಿ ವಿಡಿಯೋ ರೆಕಾರ್ಡ್‌ ಮಾಡಿ ಹರಿಬಿಟ್ಟ ಪೊಲೀಸರ ಮೇಲೆ ಕ್ರಮಕ್ಕೆ ವಕೀಲ ಜಗದೀಶ ಒತ್ತಾಯ

posted in: ರಾಜ್ಯ | 0

ಬೆಂಗಳೂರು: ಸಿಡಿ ಪ್ರಕರಣದಲ್ಲಿ ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿ ಯುವತಿ ವಾಪಸ್‌ ತೆರಳುವ ಸಂದರ್ಭದಲ್ಲಿ ಹಿಂಬದಿಯಿಂದ ಚಿತ್ರೀಕರಣ ಮಾಡಿ ಮಾಧ್ಯಮಗಳಿಗೆ ಬಿಡುಗಡೆ ಮಾಡಿದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ವಕೀಲರಾದ ಜಗದೀಶ್ ಒತ್ತಾಯಿಸಿದ್ದಾರೆ.
ಬುಧವಾರ ಬೆಳಿಗ್ಗೆ ಫೇಸ್‍ಬುಕ್ ಲೈವ್‍ನಲ್ಲಿ ಮಾತನಾಡಿರುವ ಅವರು, ಹೇಳಿಕೆ ದಾಖಲಿಸಿಕೊಳ್ಳುವಾಗ ನ್ಯಾಯಾಧೀರು ಹಾಗೂ ಸಂತ್ರಸ್ತೆ ಮಾತ್ರ ಇದ್ದರು. ಹೊರಗಡೆ ಪೊಲೀಸರು ಹಾಗೂ ಕೆಲ ವಕೀಲರನ್ನು ಹೊರತುಪಡಿಸಿ ಬೇರೆ ಯಾರು ಇರಲಿಲ್ಲ. ವಿಡಿಯೋ ಚಿತ್ರೀಕರಣ ಮಾಡಲು ಪೊಲೀಸರಿಂದ ಮಾತ್ರ ಸಾಧ್ಯ. ಉದ್ದೇಶ ಪೂರ್ವಕವಾಗಿಯೇ ಕೆಪಿಸಿಸಿಯ ಕಾನೂನು ಘಟಕದ ಸೂರ್ಯ ಮುಕುಂದ್‍ರಾಜ್ ಅವರನ್ನೂ ಚಿತ್ರೀಕರಣ ಮಾಡಿ ಮಾಧ್ಯಮಗಳಿಗೆ ಮಾಹಿತಿ ನೀಡಲಾಗಿದೆ. ಈ ಮೂಲಕ ಆರೋಪಿಗೆ ಪೂರಕವಾದ ಮಾಹಿತಿ ಒದಗಿಸಿ ಪ್ರಕರಣ ದುರ್ಬಲಗೊಳ್ಳಲು ಹಾಗೂ ಸಾಕ್ಷ್ಯ ನಾಶ ಮಾಡಲು ವಿಶೇಷ ತನಿಖಾ ದಳದ ಅಧಿಕಾರಿಗಳೇ ನೆರವಾಗುತ್ತಿದ್ದಾರೆ ಎಂದು ಜಗದೀಶ್ ಆರೋಪಿಸಿದ್ದಾರೆ.
ನಾವು ಈ ವಿಷಯಗಳನ್ನು ಮುಂದಿಟ್ಟುಕೊಂಡು ಹೈಕೋರ್ಟ್‍ಗೆ ಮೇಲ್ಮನವಿ ಸಲ್ಲಿಸುತ್ತೇವೆ. ಪ್ರಕರಣದಲ್ಲಿ ನೇರವಾಗಿ ಐಪಿಸಿ ಸೆಕ್ಷನ್ 376 ಅಡಿ ಅತ್ಯಾಚಾರ ಪ್ರಕರಣ ದಾಖಲಿಸುವಂತೆ ನ್ಯಾಯಲಕ್ಕೆ ಮನವಿ ಮಾಡಲಾಗುವುದು ಎಂದು ಹೇಳಿದ್ದಾರೆ.

advertisement

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಇದೀಗ ಗದಗದಲ್ಲಿ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ದಸರಾ ರಜೆ: ನಾಳೆಯಿಂದ ಕೆಎಸ್‌ಆರ್‌ಟಿಸಿಯ ಹೆಚ್ಚುವರಿ 2000 ವಿಶೇಷ ಬಸ್‌ ಸಂಚಾರ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement