ಅನವಶ್ಯಕ ಹೇಳಿಕೆಯಿಂದ ತನಿಖೆಯ ಗಂಭೀರತೆ ಹಾಳು ಮಾಡಬೇಡಿ: ಬೊಮ್ಮಾಯಿ

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ತಮ್ಮ ಸರ್ಕಾರವನ್ನು ಟೀಕಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿರುವ ಗೃಹ,  ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ, ಅನವಶ್ಯಕವಾಗಿ ಮಾತನಾಡಿ ಪ್ರಕರಣದ ತನಿಖೆಯ ಗಾಂಭೀರ್ಯತೆ ಹಾಳು ಮಾಡಬೇಡಿ ಎಂದು ಹೇಳಿದ್ದಾರೆ.
ಬುಧವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಎಸ್ಐಟಿ ತನಿಖೆ ಕ್ರಮಬದ್ಧವಾಗಿ ಕಾನೂನು ಪ್ರಕಾರ ನ್ಯಾಯಸಮ್ಮತವಾಗಿ ವಿಚಾರಣೆ ನಡೆಸುತ್ತಿದೆ. ಇಂಥ ಸಂದರ್ಭದಲ್ಲಿ ಪ್ರತಿಭಟನೆ,

ಕೋಟ್
ಎಸ್ ಐ ಟಿ ತನಿಖಾ  ತಂಡ ಯಾರ ಒತ್ತಡಕ್ಕೂ ಮಣಿಯುವುದಿಲ್ಲ. ಎಂಥಹ ಅಡೆತಡೆಗಳಿಗೂ ಮಣೆ ಹಾಕುವುದಿಲ್ಲ. ಸತ್ಯ ಸಂಗತಿ ಹೊರಬರಬೇಕಾದರೆ ಎಸ್ಐಟಿ ತನಿಖೆ ಅಗತ್ಯ. ಅದಕ್ಕಾಗಿಯೇ ತನಿಖೆಗೆ ದಕ್ಷ ಅಧಿಕಾರಿಗಳನ್ನು ನೇಮಿಸಲಾಗಿದೆ.

-ಬಸವರಾಜ ಬೊಮ್ಮಾಯಿ,ಗೃಹ ಸಚಿವರು

ಸಾಮಾಜಿಕ ಜಾಲತಾಣಗಳ ಮೂಲಕ  ಇಲ್ಲಸಲ್ಲದ ಹೇಳಿಕೆಯನ್ನು ನೀಡಬೇಡಿ. ಅನಾವಶ್ಯಕವಾಗಿ ಮಾತನಾಡಿ ಪ್ರಕತಣದ ಗಾಂಭೀರ್ಯತೆ ಹಾಳು‌ಮಾಡಬೇಡಿ. ತನಿಖೆಯ ಪ್ರಗತಿಗೆ ಅಡ್ಡ ಪಡಿಸಬೇಡಿ ಎಂದು ಪ್ರತಿ ಪಕ್ಷಗಳಿಗೆ ವಿನಂತಿ ಮಾಡಿದರು.
ಕಾಂಗ್ರೆಸ್ಸಿಗೆಎಲ್ಲಿದೆ ನೈತಿಕತೆ?:
ಜಾರಕಿಹೊಳಿ ಪ್ರಕರಣದಲ್ಲಿ ನಮ್ಮನ್ನು ಟೀಕಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ನೈತಿಕ ಅಧಿಕಾರ ಎಲ್ಲಿದೆ? ಮಾಜಿ ಸಚಿವ ಹುಲ್ಲಪ್ಪ ಮೇಟಿ ಸಿಡಿ ಪ್ರಕರಣದಲ್ಲಿ ಇವರು ತನಿಖೆ ಮಾಡಿದ್ದಾರಾ ಎಂದು ಪ್ರಶ್ನಿಸಿದ ಅವರು,   ಯಾರ ವಿರುದ್ಧವಾದರೂ ಎಫ್ಐಆರ್ ದಾಖಲು ಮಾಡಿದ್ದಾರಾ? ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿ ಆರೋಪಿಗೆ ಕ್ಲೀನ್ ಚಿಟ್ ಕೊಟ್ಟರು. ಒಂದು ಬಾರಿಯೂ ಯಾರನ್ನೂ ಕರೆದು ವಿಚಾರಣೆ ಮಾಡಲಿಲ್ಲ. ಸಿಡಿ ಮಾಡಿದವರನ್ನು ಕೂಡ ಕಂಡುಹಿಡಿಯಲಿಲ್ಲ. ಇದನ್ನೆಲ್ಲಾ ಮರೆತಿರುವ ಕಾಂಗ್ರೆಸ್ ಯಾವ ನೈತಿಕತೆಯಿಂದ ಎಸ್ಐಟಿ ತನಿಖೆ ಪ್ರಶ್ನಿಸುತ್ತಿದೆ ಎಂದು ಬೊಮ್ಮಾಯಿ ಕಾಂಗ್ರೆಸ್ ನಾಯಕರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಎಸ್ಐಟಿ ಕ್ರಿಮಿನಲ್ ಪ್ರೊಸೀಜರ್ ಕೋಡ್ ಪ್ರಕಾರ ತನಿಖೆ ಮಾಡಬೇಕಾಗುತ್ತದೆ.  ಎಲ್ಲ ಅಂಶಗಳನ್ನು ಕೋರ್ಟ್ ಆಫ್ ಲಾ ದಲ್ಲಿ ನಾವು ಸಾಬೀತು ಮಾಡಬೇಕಾಗುತ್ತದೆ. ಹೀಗಾಗಿ ಈ ಪ್ರಕರಣದಲ್ಲಿ ಯಾರು ಮಧ್ಯಪ್ರವೇಶ ಮಾಡಬಾರದು. ಆ ಕಾರಣಕ್ಕಾ  ನಾನು ಕೂಡ ತನಿಖೆ ಕುರಿತು ಹೆಚ್ಚು ಮಾತನಾಡಲು ಬಯಸುವುದಿಲ್ಲ ಎಂದು ಬೊಮ್ಮಾಯಿ ಹೇಳಿದರು.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement