ದೆಹಲಿ ಸಫ್ದರ್ಜಂಗ್ ಆಸ್ಪತ್ರೆಯ ಐಸಿಯುನಲ್ಲಿ ಬೆಂಕಿ ಅವಘಡ

ನವ ದೆಹಲಿ: ಇಲ್ಲಿನ ಸಫ್ದರ್ಜಂಗ್ ಆಸ್ಪತ್ರೆಯ ಐಸಿಯುನಲ್ಲಿ ಬುಧವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ 50 ರೋಗಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.
ಬುಧವಾರ ಬೆಳಿಗ್ಗೆ 6: 30 ರ ಸುಮಾರಿಗೆ ಸಂಭವಿಸಿದ ಬೆಂಕಿ ಅನಾಹುತದಲ್ಲಿ ಯಾವುದೇ ಅಪಘಾತ ಸಂಭವಿಸಿಲ್ಲ ಎಂದು ಅವರು ಹೇಳಿದರು.
ಒಂಭತ್ತು ಅಗ್ನಿಶಾಮಕದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಿಯಂತ್ರಣಕ್ಕೆ ತಂದಿತು.
ಆಸ್ಪತ್ರೆಯ ಸಿಬ್ಬಂದಿಯ ಸಹಾಯದಿಂದ ಸುಮಾರು 50 ರೋಗಿಗಳನ್ನು ತಕ್ಷಣ ಇತರ ವಾರ್ಡ್‌ಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ದೀದಿಗೆ ಶಾಕ್‌ ಮೇಲೆ ಶಾಕ್‌ ; ಹೊರಬಿತ್ತು ಎನ್‌ಡಿಎಗೆ ಬೆಂಬಲ ಸೂಚಿಸಿದ 19 ಟಿಎಂಸಿ ಸಂಸದರ ಪಟ್ಟಿ ; ಯಾರೆಲ್ಲ ಇದ್ದಾರೆ ಗೊತ್ತೆ ?

ನಿಮ್ಮ ಕಾಮೆಂಟ್ ಬರೆಯಿರಿ

advertisement