ಬಿಜೆಪಿ ಸರಕಾರ ರಚನೆಗೆ ಕಾರಣರಾದ ನಾವೆಲ್ಲ ರಮೇಶ ಜಾರಕಿಹೊಳಿ ಬೆನ್ನಿಗೆ ನಿಲ್ಲುತ್ತೇವೆ: ಸಚಿವ ಗೋಪಾಲಯ್ಯ

ಬೆಂಗಳೂರು: ಸಮ್ಮಿಶ್ರ ಸರ್ಕಾರ ಪತನಗೊಳಿಸಿ ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ನಾವೆಲ್ಲರೂ ಒಗ್ಗಟ್ಟಾಗಿದ್ದು, ರಮೇಶ್ ಜಾರಕಿಹೊಳಿ ಅವರ ಬೆನ್ನಿಗೆ ನಿಲ್ಲುತ್ತೇವೆ ಎಂದು ಅಬಕಾರಿ ಸಚಿವ ಗೋಪಾಲಯ್ಯ ಹೇಳಿದ್ದಾರೆ.
ರಮೇಶ್ ಜಾರಕಿಹೊಳಿ ಸಿಡಿ ವಿಚಾರವಾಗಿ ಮಾತನಾಡಿದ ಅವರು, ಸದ್ಯ ಎಸ್ ಐಟಿ ತನಿಖೆಯನ್ನು ಸಮರ್ಥವಾಗಿ ನಿರ್ವಹಿಸುತ್ತಿದೆ. ನಮ್ಮಲ್ಲಿ ಯಾವುದೇ ಒಡಕ್ಕಿಲ್ಲ. ನಾವೆಲ್ಲರೂ ಒಗ್ಗಟ್ಟಾಗಿದ್ದು, ರಮೇಶ್ ಜಾರಕಿಹೊಳಿ ಅವರ ಬೆನ್ನಿಗೆ ನಿಲ್ಲುವುದಾಗಿ ಹೇಳಿದರು.
ಇದೇ ವೇಳೆ ಅಬಕಾರಿ ಇಲಾಖೆಯಲ್ಲಿನ ಆದಾಯ ಸಂಗ್ರಹ ಕುರಿತಂತೆ ಮಾಹಿತಿ ನೀಡಿದ ಸಚಿವರು, ಸರ್ಕಾರ ಕೊಟ್ಟ ಗುರಿಯನ್ನುತಲುಪಿದ್ದು, 2020-21ನೇ ಸಾಲಿನ 22700 ಕೋಟಿ ರೂ. ಆದಾಯ ನಿರೀಕ್ಷೆ ತಲುಪಿದ್ದು, ಇನ್ನು ಮಾರ್ಚ್ 31 ರವರೆಗೆ 200 ಕೋಟಿ ರೂ. ಹೆಚ್ಚುವರಿ ಆದಾಯ ಸಂಗ್ರಹವಾಗಲಿದೆ ಎಂದರು.
ಈ ತಿಂಗಳಾಂತ್ಯದಲ್ಲಿ ಇನ್ನು ಹೆಚ್ಚಿನ ಅದಾಯ ಬರುವ ಸಾಧ್ಯತೆ ಇದೆ.ಸಿಎಲ್ 7 ಮತ್ತು ಎಂಎಸ್ ಐಎಲ್ ನೀಡಲು ತೀರ್ಮಾನ ಮಾಡಲಾಗಿದೆ. ಇದಕ್ಕಾಗಿ 60 ಜೀಪುಗಳನ್ನು ಖರೀದಿಸಲು ಅನುಮತಿ ಸಿಕ್ಕಿದೆ. 300 ಮೋಟಾರ್ ಬೈಕ್, ಜಿಲ್ಲಾಧಿಕಾರಿ ಕಚೇರಿಗೆ ನಾಲ್ಕು ರಿವಾಲ್ವರ್ ನೀಡಲು ತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಗಾಂಜಾ ಹಾಗೂ ಮಾದಕ ದ್ರವ್ಯ ನಿಯಂತ್ರಣಕ್ಕೆ ಪ್ರತ್ಯೇಕ ಡಿಸಿ ನೇಮಕಾತಿ ಮಾಡಿ ಅಕ್ರಮ ಮಾದಕ ವಸ್ತುಗಳನ್ನು ಸಾಗಾಣಿಕೆ ತಡೆಯಲು ಚಿಂತನೆ ನಡೆಸಲಾಗಿದೆ. ಈ ಕುರಿತು ಕಾನೂನು ಸಚಿವರ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಸಚಿವ ಗೋಪಾಲಯ್ಯ ತಿಳಿಸಿದರು.

ಪ್ರಮುಖ ಸುದ್ದಿ :-   ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement