ಮಹಾರಾಷ್ಟ್ರದಲ್ಲಿ 40 ಸಾವಿರ ಸಮೀಪ ದೈನಂದಿನ ಕೊರೊನಾ ಪ್ರಕರಣ ದಾಖಲು

ಮುಂಬೈ : ಹೆಮ್ಮಾರಿ ಕೊರೊನಾ ನರ್ತನಕ್ಕೆ ಮಹಾರಾಷ್ಟ್ರ ತತ್ತರಗೊಂಡಿದ್ದು , ಕಳೆದ 24 ಗಂಟೆಯಲ್ಲಿ 39,544 ಕೇಸ್ ಪತ್ತೆಯಾಗಿದೆ.
ದೇಶದಲ್ಲೇ ಪ್ರತಿನಿತ್ಯ ಅತಿಹೆಚ್ಚು ಕೊವಿಡ್-19 ಸೋಂಕಿತ ಪ್ರಕರಣಗಳು ಮಹಾರಾಷ್ಟ್ರ ರಾಜ್ಯವೊಂದರಲ್ಲೇ ಪತ್ತೆಯಾಗುತ್ತಿದೆ.
ಕಳೆದ 24 ಗಂಟೆಯಲ್ಲಿ 39,544 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿದ್ದು, ಈ ಮೂಲಕ. ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣ ಸಂಖ್ಯೆ 28,12,980 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಮಹಾರಾಷ್ಟ್ರದಲ್ಲಿ ಬುಧವಾರ 227 ಹೊಸ ಸಾವುಗಳು ವರದಿಯಾಗಿದ್ದು, ಈ ಮೂಲಕ ಸಾವಿನ ಸಂಖ್ಯೆ 54,649 ಕ್ಕೆ ಏರಿಕೆಯಾಗಿದೆ. ಸದ್ಯ ರಾಜ್ಯದಲ್ಲಿ 3,56,243 ಸಕ್ರಿಯ ಪ್ರಕರಣಗಳಿದೆ ಎಂದು ಅಲ್ಲಿನ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿದ್ದಕ್ಕೆ ವಿರೋಧ : ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿದ ಪಕ್ಷದ ರಾಷ್ಟ್ರೀಯ ವಕ್ತಾರೆ ರಾಧಿಕಾ ಖೇರಾ

ನಿಮ್ಮ ಕಾಮೆಂಟ್ ಬರೆಯಿರಿ

advertisement