ಕರ್ನಾಟಕದಲ್ಲಿ ಗುರುವಾರವೂ ನಾಲ್ಕು ಸಾವಿರ ದಾಟಿದ ಏಕದಿನದ ಕೊರೊನಾ ಸೋಂಕು..ಬೆಂಗಳೂರಲ್ಲಿಯೇ ಶೇ.೬೮ರಷ್ಟು ಪ್ರಕರಣ..!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣ ಗುರುವಾರವೂ ನಾಲ್ಕು ಸಾವಿರ ದಾಟಿದೆ. ಕಳೆದ 24 ಗಂಟೆಯಲ್ಲಿ 4,234 ಜನರಿಗೆ ಕೊರೊನಾ ದೃಢಪಟ್ಟಿದೆ.
ಈ ಮೂಲಕ ಕೊರೋನಾ ಸೋಂಕಿತರ ಸಂಖ್ಯೆ 10,01,238ಕ್ಕೆ ಏರಿಕೆಯಾಗಿದೆ. ಅಲ್ಲದೇ 18 ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 2,906 ಜನರು ಸೇರಿದಂತೆ ರಾಜ್ಯದಲ್ಲಿ 4,234 ಜನರಿಗೆ ಕೊರೊನಾ ಸೋಂಕು ದಾಖಲಾದ ವರದಿಯಾಗಿದೆ. ಗುರುವಾರ 1,599 ಜನರು ಬಿಡುಗಡೆಯಾಗಿದ್ದು, ಇದುವರೆಗೆ 9,57,769 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 30,865 ಸಕ್ರಿಯ ಪ್ರಕರಣಗಳಿವೆ.
ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಬೆಂಗಳೂರು ನಗರದಲ್ಲಿ 11 ಜನರು, ಧಾರವಾಡದಲ್ಲಿ ಇಬ್ಬರು, ಕಲಬುರ್ಗಿ, ಮಂಡ್ಯ, ಮೈಸೂರು, ತುಮಕೂರಿನಲ್ಲಿ ಒಬ್ಬೊಬ್ಬರು ಸೇರಿದಂತೆ 18 ಸೋಂಕಿತರು ಚಿಕಿತ್ಸೆ ಮೃತಪಟ್ಟಿದ್ದಾರೆ. ಇದರಿಂದಾಗಿ ಮೃತಪಟ್ಟವರ ಸಂಖ್ಯೆ 12,585ಕ್ಕೆ ಏರಿಕೆಯಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement