ಕೊರೊನಾ ಹೆಚ್ಚಳ : ಬೆಂಗಳೂರಲ್ಲಿ 6 ರಿಂದ 9ನೇ‌ ತರಗತಿ ಸ್ಥಗಿತಗೊಳಿಸಿ ಆದೇಶ

ಬೆಂಗಳೂರು ನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳನ್ನು ಪರಿಗಣಿಸಿ ಪ್ರಸ್ತುತ ನಡೆಯುತ್ತಿರುವ 6-9ನೇ‌ ಭೌತಿಕ ತರಗತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲಾಗಿದೆ  ಎಂದು ಸಚಿವ ಸುರೇಶ್‌ಕುಮಾರ್ ಹೇಳಿದ್ದಾರೆ.
ಮುಂದಿನ‌ ಆದೇಶದ ವರೆಗೆ ಭೌತಿಕ ತರಗತಿಗಳನ್ನು ನಿಲ್ಲಿಸಲಾಗುತ್ತದೆ ಎಂದು ತಿಳಿಸಿರುವ ಸಚಿವರು, ಈ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದೆ ಎಂದು ಹೇಳಿದ್ದಾರೆ, ಈ ವಯೋಮಾನದ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ‌ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 10 ನೇ ತರಗತಿಗಳು ಎಂದಿನಂತೆ ಮುಂದುವರೆಯಲಿದ್ದು, ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯವಲ್ಲ ಎಂದಿದ್ದಾರೆ
ರಾಜ್ಯದ ಉಳಿದೆಡೆ ಪ್ರಸ್ತುತ ಇರುವ ವ್ಯವಸ್ಥೆ ಮುಂದುವರೆಯಲಿದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಸೂಕ್ತ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಪರೀಕ್ಷೆ: ಕಡ್ಡಾಯ ಶಿಕ್ಷಣ ಕಾಯಿದೆಯ ಅವಕಾಶಗಳಡಿಯಲ್ಲಿ 6-9ನೇ ತರಗತಿಗಳಿಗೆ ಸಂಬಂಧಿಸಿದಂತೆ ಶಾಲೆಗಳು ನಡೆಸಬೇಕಾದ ಮೌಲ್ಯಾಂಕನ ಪರೀಕ್ಷೆಗಳ ಕುರಿತಂತೆ ಮುಂದಿನ ದಿನಗಳಲ್ಲಿ‌ ಅಗತ್ಯ ನಿರ್ದೇಶನಗಳನ್ನು ನೀಡಲಾಗುವುದೆಂದು ಸಚಿವರು ಸ್ಪಷ್ಟ ಪಡಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement