ಭಿನ್ನಾಭಿಪ್ರಾಯಗಳ ಬಗ್ಗೆ  ಸಿಎಂ ಜತೆ ಚರ್ಚಿಸಿ: ಸಚಿವ ಈಶ್ವರಪ್ಪಗೆ ಬೊಮ್ಮಾಯಿ ಮನವಿ

ಬೆಂಗಳೂರು: ಅನುದಾನ ಬಿಡುಗಡೆ ವಿಚಾರ ಆಡಳಿತಾತ್ಮಕವಾದದ್ದು. ಈ ವಿಚಾರದ ಬಗ್ಗೆ ಭಿನ್ನಾಭಿಪ್ರಾಯ, ಆಕ್ಷೇಪಗಳಿದ್ದರೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆ ಚರ್ಚೆ ನಡೆಸಿ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ್ ಬೊಮ್ಮಾಯಿ ಅವರು ಗ್ರಾಮೀಣಾಭಿವೃದ್ಧಿ ಖಾತೆ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಮನವಿ ಮಾಡಿದ್ದಾರೆ.
ಗುರುವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇಲಾಖೆಯ ವಿಚಾರವಾಗಿ ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡುವುದಾಗಿ ಈಶ್ವರಪ್ಪ ಹೇಳಿಕೆ ನೀಡಿದ್ದನ್ನು ನಾನು ಗಮನಿಸಿದ್ದೇನೆ. ತುರ್ತಾಗಿ ಅವರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಸಮಸ್ಯೆ ಬಗೆಹರಿಸಿಕೊಳ್ಳಲಿ ಎಂದು ಸಲಹೆ ನೀಡಿದರು
ಕೋಟ್ 
ಈಶ್ವರಪ್ಪ ಅವರು ಆದಷ್ಟು ಬೇಗ ಮುಖ್ಯಮಂತ್ರಿಗಳನ್ನು ಭೇಟಿಯಾಗಲಿ. ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿ. ಆದಷ್ಟು ಬೇಗ ಶಾಸಕರಿಗೆ ಅನುದಾನ ಸಿಗುವಂತಾಗಲಿ.  ಈ ವಿಷಯವನ್ನು ವರಿಷ್ಠರ ಬಳಿ ತೆಗೆದುಕೊಂಡು ಹೋಗುವ ಅವಶ್ಯಕತೆ ಇಲ್ಲ.  ಇಲ್ಲಿಯೇ ಬಗೆಹರಿಸಿಕೊಳ್ಳುವುದು ಸೂಕ್ತ
-ಬಸವರಾಜ ಬೊಮ್ಮಾಯಿ,ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು

ಕಳೆದ ವರ್ಷ ಕೋವಿಡ್ ನಿಂದಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿ ಇರಲಿಲ್ಲ. ಇತ್ತೀಚೆಗೆ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಿದೆ.  ಶಾಸಕರ ಒತ್ತಡದ ಮೇರೆಗೆ ಶಾಸಕರಿಗೆ ಮುಖ್ಯಮಂತ್ರಿಗಳು ಅನುದಾನ ಬಿಡುಗಡೆ ಮಾಡಿದ್ದಾರೆ. ಮುಖ್ಯಮಂತ್ರಿಗಳ ಬಳಿ ಹಣಕಾಸು ಖಾತೆಯೂ ಇರುವುದರಿಂದ ಅವರೇ ಶಾಸಕರಿಗೆ ಹಣ ಬಿಡುಗಡೆ ಮಾಡಿದ್ದಾರೆ. ಆಕ್ಷೇಪಗಳಿದ್ದರೆ ಅದನ್ನು ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಿ ಬಗೆಹರಿಸಿಕೊಳ್ಳಬೇಕು. ಆಡಳಿತಾತ್ಮಕ ವಿಷಯ ರಾಜ್ಯಪಾಲರ ಅಂಗಳಕ್ಕೆ ತೆಗೆದುಕೊಂಡು ಹೋಗಿರುವುದು ಸೂಕ್ತ ಅಲ್ಲ ಎಂದು ಬೊಮ್ಮಾಯಿ ಹೇಳಿದರು.
ನಮ್ಮದು ಶಿಸ್ತಿನ ಪಕ್ಷ.  ಶಿಸ್ತು ಉಲ್ಲಂಘನೆ ಆಗಬಾರದು ಎಂದು ಬೊಮ್ಮಾಯಿ ತಿಳಿಸಿದರು

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್‌: ವೀಡಿಯೊ ನೀಡಿದ್ದು ನಾನೇ ಎಂದಿದ್ದ ಮಾಜಿ ಕಾರು ಚಾಲಕ ಕಾರ್ತಿಕ್ ನಾಪತ್ತೆ...!?

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement