ಸಚಿವ ಕೆ.ಎಸ್‌.ಈಶ್ವರಪ್ಪ ವರ್ತನೆ ಸರಿಯಲ್ಲ: ಸಚಿವ ಸಿ.ಸಿ.ಪಾಟೀಲ

ಗದಗ: ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಸಚಿವ ಕೆ.ಎಸ್‌. ಈಶ್ವರಪ್ಪ ರಾಜ್ಯಪಾಲರು ಹಾಗೂ ಪಕ್ಷದ ವರಿಷ್ಠರಿಗೆ ದೂರು ನೀಡಿದ್ದು ಖಂಡನೀಯ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಹೇಳಿದರು.
ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ. ಇಂಥ ಸಂದರ್ಭದಲ್ಲಿ ಪಕ್ಷಕ್ಕೆ ಮುಜುಗುರ ಉಂಟು ಮಾಡಿದ್ದು ಸರಿಯಲ್ಲ ಎಂದರು.
ಉಭಯ ನಾಯಕರು ಒಂದೇ ಜಿಲ್ಲೆಯವರು. ಒಟ್ಟಿಗೆ ಕುಳಿತು ಭಿನ್ನಾಭಿಪ್ರಾಯ ಬಗೆಹರಿಸಿಕೊಳ್ಳಬಹುದಿತ್ತು. ರಾಜ್ಯಪಾಲರಿಗೆ ದೂರು ನೀಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಮುಖ್ಯಮಂತ್ರಿಗೆ ಪರಮಾಧಿಕಾರ ಇರುತ್ತದೆ. ಎಲ್ಲ ಶಾಸಕರ ಬೇಡಿಕೆಗಳಿಗೆ ಸ್ಪಂದಿಸುವ ಜವಾಬ್ದಾರಿಯೂ ಇರುತ್ತದೆ. ಹಿರಿಯ ಮುಖಂಡರಾದ ಈಶ್ವರಪ್ಪ ಅವರು ವಿಷಯವನ್ನು ಇಷ್ಟು ದೊಡ್ಡದಾಗಿ ಮಾಡಬಾರದಿತ್ತು ಎಂದು ತಿಳಿಸಿದರು.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸೋನಿಯಾ ಗಾಂಧಿಗೆ ಸಿದ್ದರಾಮಯ್ಯರನ್ನು ಪರಿಚಯಿಸಿದ್ದೇ ನಾನು, ಲಾಟರಿ ಹೊಡೆದ್ರು ಸಿಎಂ ಆದ್ರು ; ಬಿ.ಆರ್. ಪಾಟೀಲ ಫೋನ್ ಕರೆ ಲೀಕ್‌

ನಿಮ್ಮ ಕಾಮೆಂಟ್ ಬರೆಯಿರಿ

advertisement