ಕೃಷಿ ಸಚಿವ ಸಚಿವ ಬಿಸಿ ಪಾಟೀಲಗೆ ಮನೆಗೇ ಬಂದು ಲಸಿಕೆ : ತಾಲೂಕು ಆರೋಗ್ಯಾಧಿಕಾರಿ ಅಮಾನತು

ಹಾವೇರಿ: ಸಚಿವರಿಗೆ ಲಸಿಕೆ ನೀಡುವ ಸಲುವಾಗಿ ಬಿ ಸಿ ಪಾಟೀಲ ಅವರ ಮನೆಗೆ ಭೇಟಿ ನೀಡುವಂತೆ ತಮ್ಮ ಸಿಬ್ಬಂದಿಗೆ ಆದೇಶಿಸಿದ್ದ ಹಿರೇಕೆರೂರು ತಾಲೂಕು ಆರೋಗ್ಯ ಅಧಿಕಾರಿ ಡಾ. ಝಡ್. ಆರ್. ಮಕಾಂದಾರ್ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಅಮಾನತುಗೊಳಿಸಲಾಗಿದೆ.
ಮಾರ್ಚ್ 2ರಂದು, ಹಿರೇಕೆರೂರು ತಾಲೂಕಿನ ಆರೋಗ್ಯ ಇಲಾಖೆಯ ಸಿಬ್ಬಂದಿ ಸಚಿವ ಪಾಟೀಲ್ ಮನೆಗೆ ಭೇಟಿ ನೀಡಿ ಲಸಿಕೆಯ ಮೊದಲ ಡೋಸ್ ನೀಡಿದ್ದರು.ಇದು ವ್ಯಾಕ್ಸಿನೇಷನ್ ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳಿಗೆ ವಿರುದ್ಧವಾಗಿದ್ದು ಆರೋಗ್ಯ ಸಚಿವಾಲಯದ ಮಾನದಂಡಗಳ ಉಲ್ಲಂಘನೆ ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಸಚಿವ ಪಾಟೀಲ ಮತ್ತು ಆರೋಗ್ಯ ಇಲಾಖೆ ಈ ಸಂಬಂಧ ಟೀಕೆಗೆ ಗುರಿಯಾಗಿತ್ತು. ಕೇಂದ್ರ ಆರೋಗ್ಯ ಸಚಿವಾಲಯ ಸಹ ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ನಂತರ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಾಲೂಕು ಆರೋಗ್ಯ ಅಧಿಕಾರಿಯಿಂದ ಈ ಸಂಬಂಧ ವಿವರಣೆ ಕೇಳಿತ್ತು.
ಸಚಿವರ ಕೋರಿಕೆಯ ಮೇರೆಗೆ ಈ ಬಗ್ಗೆ ಉನ್ನತ ಅಧಿಕಾರಿಗಳನ್ನು ಸಂಪರ್ಕಿಸದೆ ಹಿರೇಕೆರೂರು ತಾಲೂಕು ಆರೋಗ್ಯ ಅಧಿಕಾರಿ ತಮ್ಮ ಸಿಬ್ಬಂದಿಯನ್ನು ಸಚಿವರ ಮನೆಗೆ ಕಳುಹಿಸಲು ನಿರ್ಧರಿಸಿದ್ದಾರೆ ಎಂಬುದು ಇಲಾಖೆಗೆ ಮನವರಿಕೆಯಾಗಿತ್ತು.
ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿದ ನಂತರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಾ.ಕೆ.ವಿ.ತ್ರಿಲೋಕ್ ಚಂದ್ರ ಅವರು ಡಾ.ಮಕಾಂದಾರ್ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement