ಕರ್ನಾಟಕದಲ್ಲಿ ಐದು ಸಾವಿರದ ಸಮೀಪ, ಬೆಂಗಳೂರಲ್ಲಿ ಮೂರೂವರೆ ಸಾವಿರ ದಾಟಿದ ದೈನಂದಿನ ಕೊರೊನಾ ಪ್ರಕರಣ..

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೋನಾ ಆರ್ಭಟಿಸಿದ್ದು, ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 4,991 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅಲ್ಲದೆ 6 ಸೋಂಕಿತರು ಮೃತಪಟ್ಟಿದ್ದಾರೆ.
ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಕೊರೊನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 3,509 ಸೇರಿದಂತೆ ರಾಜ್ಯಾಧ್ಯಂತ 4,991 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10,06,229ಗೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 1631 ಸೋಂಕಿತರು ಬಿಡುಗಡೆಯಅಗಿದ್ದು, ಇದುವರೆಗೆ 9,59,400 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ರಾಜ್ಯಾದ್ಯಂತ 34,219 ಸಕ್ರಿಯ ಪ್ರಕರಣಗಳಿದ್ದು, ಬೆಂಗಳೂರು ನಗರದಲ್ಲಿ 24,600 ಸಕ್ರಿಯ ಪ್ರಕರಣಗಳಿವೆ.
ಶುಕ್ರವಾರ ಬೆಂಗಳೂರು ನಗರದಲ್ಲಿ ಐವರು ಹಾಗೂ ಕಲಬುರ್ಗಿಯಲ್ಲಿ ಒಬ್ಬರು ಸೇರಿದಂತೆ 6 ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಮೃತಪಟ್ಟವರ ಸಂಖ್ಯೆ 12,591ಕ್ಕೆ ಏರಿಕೆಯಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement