ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಪ್ರೇಕ್ಷಕರ ಮಿತಿ: ಆದೇಶ ಹಿಂಪಡೆಯಲು ನಟ ಪುನೀತ್‌ ಒತ್ತಾಯ

ಬೆಂಗಳೂರು : ರಾಜ್ಯ ಸರ್ಕಾರ ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಪ್ರೇಕ್ಷಕರ ಮಿತಿ ಹೇರಿ ಶುಕ್ರವಾರ ಆದೇಶ ಮಾಡಿದ್ದು, ಇದಕ್ಕೆ ಚಿತ್ರನಟ ಪುನೀತ್‌ ರಾಜಕುಮಾರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರದ ಆದೇಶ ಹೊರಬೀಳುತ್ತಿದ್ದಂತೆ, ಫೇಸ್‌ಬುಕ್‌ ಮೂಲಕ “ಯುವರತ್ನ’ ಚಿತ್ರದ ನಿರ್ದೇಶಕ ಸಂತೋಷ್‌ ಆನಂದರಾಮ್‌ ಅವರ ಜೊತೆಗೆ ಲೈವ್‌ ಬಂದ ನಟ ಪುನೀತ್‌ ರಾಜಕುಮಾರ್‌ ಸರ್ಕಾರದ ನಿರ್ಧಾರದ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ.
ಯುವರತ್ನ’ ಸಿನಿಮಾಕ್ಕೆ ಈಗ ಒಳ್ಳೆಯ ಓಪನಿಂಗ್‌ ಸಿಕ್ಕಿದೆ. ಪ್ರೇಕ್ಷಕರೂ ಸಾಕಷ್ಟು ಮುನ್ನೆಚ್ಚರಿಕೆ ವಹಿಸುತ್ತಿದ್ದಾರೆ. ಥಿಯೇಟರ್‌ಗಳಲ್ಲೂ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹೀಗಾಗಿ ಸರಕಾರ ನಿರ್ಧಾರವನ್ನು ವಾಪಸ್‌ ಪಡೆಯುವಂತೆ ಆಗ್ರಹಿಸಿದ್ದಾರೆ.
ಈಗಷ್ಟೇ ಚಿತ್ರರಂಗ ನಿಧಾನವಾಗಿ ಚೇತರಿಕೆ ಕಾಣುತ್ತಿದೆ. ಬಿಡುಗಡೆಯಾದ ಸಿನಿಮಾಗಳನ್ನು ನೋಡಲು ಪ್ರೇಕ್ಷಕರು ಥಿಯೇಟರ್‌ಗಲ ಕಡೆಗೆ ಬರುತ್ತಿದ್ದಾರೆ. ಯುವರತ್ನ ಸಿನೆಮಾದ ಮೂರು ದಿನಗಳ ಮುಂಗಡ ಟಿಕೆಟ್‌ ಮಾರಾಟವಾಗಿದೆ. ಈಗ ಇದ್ದಕ್ಕಿದ್ದಂತೆ ರಾಜ್ಯ ಸರ್ಕಾರ ಸಿನೆಮಾಗಳಿಗೆ 50% ಪ್ರವೇಶಕ್ಕೆ ಅನುಮತಿ ನೀಡಿದರೆ ಏನು ಮಾಡುವುದು? ಥಿಯೇಟರ್‌ನವರು, ವಿತರಕರು, ನಿರ್ಮಾಪಕರು ಸೇರಿದಂತೆ ಎಲ್ಲರಿಗೂ ತೊಂದರೆಯಾಗುತ್ತದೆ. ಆದ್ದರಿಂದ, ಸರ್ಕಾರ ಈ ನಿರ್ಧಾರವನ್ನು ಹಿಂಪಡೆಯಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

ಪ್ರಮುಖ ಸುದ್ದಿ :-   ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement