ಗಣಿ- ಖನಿಜಗಳ ಕಾಯ್ದೆ ತಿದ್ದುಪಡಿ ಮಸೂದೆ ಸಂಸತ್ತಿನಲ್ಲಿ ಅಂಗೀಕಾರ

ನವ ದೆಹಲಿ: ಗಣಿ ಮತ್ತು ಖನಿಜಗಳ (ಅಭಿವೃದ್ಧಿ ಮತ್ತು ನಿಯಂತ್ರಣಾ) ಕಾಯ್ದೆಗೆ ಸಂಬಂಧಿಸಿದಂತೆ ತರಲಾದ ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲಿಯೂ ಅಂಗೀಕಾರವಾಗಿದೆ.
ಮಾರ್ಚ್​ 19 ರಂದು ಈ ಕಾಯ್ದೆಯನ್ನು ಲೋಕಸಭೆ ಅಂಗೀಕರಿಸಿತ್ತು. ಈ ಮಸೂದೆಗೆ ಶುಕ್ರವಾರ ರಾಜ್ಯಸಭೆಯಲ್ಲೂ ಅನುಮೋದನೆ ಸಿಕ್ಕಿದೆ. ಕಲ್ಲಿದ್ದಲು ಮತ್ತು ಗಣಿಗಾರಿಕೆ ಕ್ಷೇತ್ರದಲ್ಲಿ ಕೆಲವೊಂದು ಪ್ರಕ್ರಿಯೆಗಳನ್ನು ಸರಳಗೊಳಿಸಿವ ಉದ್ದೇಶದಿಂದ ಈ ತಿದ್ದುಪಡಿ ತರಲಾಗಿದೆ.
ಗಣಿ ಮತ್ತು ಖನಿಜಗಳ (ಅಭಿವೃದ್ಧಿ ಮತ್ತು ನಿಯಂತ್ರಣಾ) ಕಾಯ್ದೆಗೆ ತಂದಿರುವ ತಿದ್ದುಪಡಿಗಳಿಂದಾಗಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮಾಣದಲ್ಲಿ ಬಾಕಿ ಉಳಿದಿರುವ ಕೆಲಸ ಕಾರ್ಯಗಳು ತ್ವರಿತಗತಿಯಲ್ಲಿ ಪೂರ್ಣಗೊಳ್ಳಲಿವೆ. ಗಣಿ ಮತ್ತು ಖನಿಜಕ್ಕೆ ಸೇರಿದ ಎಲ್ಲಾ ಬೆಳವಣಿಗೆಗಳಿಗೂ ಬಹುದೊಡ್ಡ ಮಟ್ಟದಲ್ಲಿ ಉತ್ತೇಜನ ಸಿಗಲಿದೆ ಎಂದು ಸರ್ಕಾರ ಹೇಳಿಕೊಂಡಿದೆ.
ಕೇಂದ್ರ ಕಲ್ಲಿದ್ದಲು ಮತ್ತು ಗಣಿಗಾರಿಕೆ ಸಚಿವ ಪ್ರಲ್ಹಾದ ಜೋಶಿ , ಈ ತಿದ್ದುಪಡಿಯು ಆತ್ಮನಿರ್ಭರ ಭಾರತ ಪರಿಕಲ್ಪನೆ ಅಡಿಯಲ್ಲಿ ಗಣಿಗಾರಿಕೆ ಕ್ಷೇತ್ರದಲ್ಲಿ ಮತ್ತಷ್ಟು ಶಕ್ತಿ ನೀಡಲಿದೆ. ಅಪಾರ ಪ್ರಮಾಣದ ಉದ್ಯೋಗ ಸೃಷ್ಟಿಯೂ ಸಾಧ್ಯವಾಗಲಿದೆ. ಗಣಿಗಾರಿಕೆಗೆ ಅವಕಾಶವಿರುವ ರಾಜ್ಯಗಳಲ್ಲಿ ಹೆಚ್ಚೆಚ್ಚು ಉದ್ಯೋಗಾವಕಾಶ ತೆರೆದುಕೊಳ್ಳಲಿದೆ ಎಂದು ಹೇಳಿದ್ದಾರೆ.
ಪ್ರಸ್ತುತ ಚಾಲ್ತಿಯಲ್ಲಿದ್ದ ಗಣಿ ಮತ್ತು ಖನಿಜಗಳ (ಅಭಿವೃದ್ಧಿ ಮತ್ತು ನಿಯಂತ್ರಣಾ) ಕಾಯ್ದೆಯ ಸೆಕ್ಷನ್​ 10(A)(2) ಅಡಿಯಲ್ಲಿ ಅನುಮತಿ ಹೊಂದಿದವರಿಗೆ ಮಾತ್ರ ನಿಯಮಿತ ಅವಕಾಶ ನೀಡಲಾಗುತ್ತಿತ್ತು. ಆದರೆ, ಈಗ ತಿದ್ದುಪಡಿ ಕಾಯ್ದೆ ಮೂಲಕ ಇದರ ಮೇಲಿನ ಎಲ್ಲಾ ನಿರ್ಬಂಧಗಳೂ ತೆರವುಗೊಳ್ಳಲಿದ್ದು, ಬಹಿರಂಗವಾಗಿ ಹರಾಜು ಪ್ರಕ್ರಿಯೆಗೆ ಅವಕಾಶ ಕಲ್ಪಿಸಲು ಸಾಧ್ಯವಾಗುತ್ತದೆ. ಅಂತೆಯೇ, ಈವರೆಗೆ ಗಣಿಗಾರಿಕೆಗೆ ಗುತ್ತಿಗೆ ಪಡೆಯಲು ಸಾಧ್ಯವಾಗದವರಿಗೂ ಹರಾಜಿನ ಮೂಲಕ ಅವಕಾಶ ನೀಡಲಾಗುತ್ತದೆ ಎಂದು ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ತಾಯಿಯ ಸಂಪತ್ತು ಉಳಿಸಿಕೊಳ್ಳಲು ಪಿತ್ರಾರ್ಜಿತ ತೆರಿಗೆ ಕಾನೂನು ರದ್ದುಗೊಳಿಸಿದ ರಾಜೀವ ಗಾಂಧಿ : ಪ್ರಧಾನಿ ಮೋದಿ ಆರೋಪ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement