ಜೂನ್​ ತನಕವೂ ಕೊರೊನಾ ಎಚ್ಚರಿಕೆ ಬೇಕೆಂದ ತಾಂತ್ರಿಕ ಸಲಹಾ ಸಮಿತಿ

ಬೆಂಗಳೂರು: ಕೊರೊನಾ ಹಬ್ಬದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೇ ಬೇರೆ ದಾರಿ ಇಲ್ಲ. ತಜ್ಞರ ವೈಜ್ಞಾನಿಕ ವರದಿ ಆಧಾರದ ಮೇಲೆಯೇ ನಿಯಮಗಳನ್ನು ರೂಪಿಸಲಾಗಿದೆ ಎಂದು ವೈದ್ಯಕೀಯ ಮತ್ತು ಆರೋಗ್ಯ ಸಚಿವ ಡಾ.ಸುಧಾಕರ್ ಬೆಂಗಳೂರಿನಲ್ಲಿ ಮಾತನಾಡಿದ್ದಾರೆ.
ತಾಂತ್ರಿಕ ಸಮಿತಿ ಜೂನ್​ ತಿಂಗಳ ತನಕವೂ ಎಚ್ಚರಿಕೆಯಿಂದ ಇರುವಂತೆ ತಿಳಿಸಿದೆ. ಈಗ ಎಚ್ಚೆತ್ತುಕೊಂಡು ಕಠಿಣ ಕ್ರಮ ಕೈಗೊಳ್ಳದೇ ಇದ್ದರೆ ಮುಂದಿನ ಪರಿಸ್ಥಿತಿ ಹದಗೆಡಲಿದೆ. ಕೊರೊನಾ ಬಿಗಡಾಯಿಸಬಾರದೆಂದರೆ ಮುನ್ನೆಚ್ಚರಿಕೆ ಬೇಕೇಬೇಕು. ತಾಂತ್ರಿಕ ಸಲಹಾ ಸಮಿತಿ ವರದಿ ತರಿಸಿಕೊಂಡು, ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಿಯೇ ನಿರ್ಧಾರ ಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ.
ಸದ್ಯ ಜಾರಿಗೊಳಿಸಿರುವ ಕಠಿಣ ನಿಯಮಗಳ ಪಾಲನೆ ಆಗಬೇಕು. ಈಗ ಐದು ಸಾವಿರ ಕೊವಿಡ್ ಪ್ರಕರಣಗಳು ದಾಖಲಾಗಿವೆ. ಬೆಂಗಳೂರಿನಲ್ಲೇ ಮೂರು ಸಾವಿರ ಪ್ರಕರಣಗಳು ಕಂಡುಬಂದಿವೆ. ಕಳೆದ ಬಾರಿ ಕೊವಿಡ್​ 19 ಪೀಕ್​ನಲ್ಲಿದ್ದಾಗ ನಾಲ್ಕೂವರೆ ಸಾವಿರ ಪ್ರಕರಣಗಳು ದಾಖಲಾಗುತ್ತಿದ್ದವು. ಹೀಗಾಗಿ ಸದ್ಯದ ಪರಿಸ್ಥಿತಿಯಲ್ಲಿ ಮೈಮರೆಯುವಂತಿಲ್ಲ ಎಂದು ಸರ್ಕಾರದ ನಿಯಮಾವಳಿಗಳನ್ನು ಸಮರ್ಥಿಸಿಕೊಂಡಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement