ಗಾಯಗೊಂಡ ಕಾಲು ಆರಾಮವಾಗಿ ಅತ್ತಿತ್ತ ಅಲುಗಾಡಿಸುತ್ತಿರುವ ಮಮತಾ ವಿಡಿಯೋ ವೈರಲ್..!; ಬಿಜೆಪಿ ವಾಗ್ದಾಳಿ

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಕಾಲಿಗೆ ಪಟ್ಟು ಮಾಡಿಕೊಂಡು ಚುನಾವಣೆ ಪ್ರಚಾರ ನಡೆಸುತ್ತಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾನದಲ್ಲಿ ವೈರಲ್‌ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವೀಲ್ಹ್ ಚೇರ್ ನಲ್ಲಿ ಕುಳಿತು ತಮ್ಮ ಗಾಯಗೊಂಡ ಕಾಲನ್ನುನೋವಿಲ್ಲದೆ, ಆರಾಮವಾಗಿ ಅತ್ತಿತ್ತಾ ಅಲುಗಾಡಿಸುತ್ತಿರುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಈ ವಿಡಿಯೋವನ್ನು ಅಸ್ತ್ರವಾಗಿ ಬಳಸಿಕೊಂಡಿರುವ ಪ್ರತಿಪಕ್ಷದವರು ಚುನಾವಣೆಯಲ್ಲಿ ಮತದಾರರ ಸಹಾನೂಭೂತಿ ಗಳಿಸಲು ಮಮತಾ ಆಡುತ್ತಿರುವ ನಾಟಕವಿದ್ದು ಎಂದು ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ನಾಯಕರಾದ ಬಿಜೆಪಿ ನಾಯಕರಾದ ತೇಜೀಂದರ್‌ ಬಗ್ಗಾ, ಪ್ರಣೊಯ್‌ ರಾಯ್‌, ಚಿತ್ರ ನಿರ್ಮಾಪಕ ಅಶೋಕ್‌ ಪಂಡಿತ್‌ ಸೇರಿದಂತೆ ಹಲವರು ತಮ್ಮ ಟ್ವಿಟರ್ ನಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ.
ಆದರೆ, ಟಿಎಂಸಿ, ತಮ್ಮ ಪಕ್ಷದ ಮುಖ್ಯಸ್ಥೆ ಅವಮಾನಿಸುವುದನ್ನು ಖಂಡಿಸಿದ್ದು, ಮಹಿಳೆಯರಿಗೆ ಹೇಗೆ ಗೌರವ ನೀಡಬೇಕು ಎಂಬುದನ್ನು ಬಿಜೆಪಿ ಕಲಿಯಬೇಕಾಗಿದೆ ಎಂದು ಹೇಳಿದೆ. ಬಿಜೆಪಿ ವಕ್ತಾರ ಪ್ರೊಣೊಯ್ ರಾಯ್ ಫೇಸ್ ಬುಕ್ ನಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದು, ಮಮತಾ ಬ್ಯಾನರ್ಜಿ ಇಂತಹ ನಾಟಕವಾಡುವುದನ್ನು ನಿಲ್ಲಿಸಬೇಕು ಎಂದಿದ್ದಾರೆ.

ಪ್ರಮುಖ ಸುದ್ದಿ :-   ಮೈಸೂರು ಅನಂತಸ್ವಾಮಿ ಧಾಟಿಯಲ್ಲಿ ನಾಡಗೀತೆ : ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್‌ ; ದಶಕಗಳ ಸಮಸ್ಯೆಗೆ ತೆರೆ

 

https://twitter.com/ashokepandit/status/1378013532487180295?ref_src=twsrc%5Etfw

ಮೇಲಿನ ವೀಡಿಯೋವನ್ನು ಟ್ವಿಟರ್ ನಲ್ಲಿ ಪೋಸ್ಟ್ ಮಾಡಲಾಗಿದೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement