ತನಿಖೆ ಹೆಸರಲ್ಲಿ ಎಸ್‌ಐಟಿಯಿಂದ ಸಾಕ್ಷ್ಯ ನಾಶ: ಸಿಡಿ ಯುವತಿಯಿಂದ ಪೊಲೀಸ್‌ ಆಯುಕ್ತರಿಗೆ ಪತ್ರ

ಬೆಂಗಳೂರು;ರಮೇಶ್ ಜಾರಕಿಹೊಳಿ ನೀಡಿದ ದೂರಿನಲ್ಲಿ ನನ್ನ ಹೆಸರಿಲ್ಲ. ಎಸ್‌ಐಟಿ ಪಿಜಿಯಲ್ಲಿ ಪರಿಶೀಲನೆ ಮಾಡಿ ಸಾಕ್ಷ್ಯ ನಾಶ ಮಾಡಿದ್ದಾರೆ ಎಂದು ಆರೋಪಿಸಿ ಸಿಡಿ ಪ್ರಕರಣದ ಯುವತಿ ಬೆಂಗಳೂರು ಆಯುಕ್ತರಿಗೆ ಪತ್ರ ಬರೆದಿದ್ದಾರೆ.
ಆರೋಪಿತರು ಮುಕ್ತವಾಗಿ ಓಡಾಡಲು ಎಸ್‌ಐಟಿ ಅವಕಾಶ ನೀಡಿದ್ದು, ನನಗೆ ಒಂದು ದಿನವೂ ಬಿಡದೆ ವಿಚಾರಣೆ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ. ನನ್ನನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಲು ಪ್ರಯತ್ನಿಸುತ್ತಿದ್ದಾರೆ. ಇದುವರೆಗೂ ನನ್ನನ್ನು ತೇಜೋವಧೆ ಮಾಡುವ, ನನ್ನ ವಿರುದ್ಧ ಕಪೋಲಕಲ್ಪಿತ ವಿಷಯಗಳು ಪ್ರಸಾರವಾಗುತ್ತಿವೆ. ನಾನು ಪ್ರಕರಣದ ದೂರುದಾರರಾಗಿದ್ದರೂ ನನ್ನ ಚಾರಿತ್ರ್ಯವಧೆ ಮಾಡುವ ಷಡ್ಯಂತ್ರ ನಡೆಸಲಾಗಿದೆ ಎಂದು ಯುವತಿ ದೂರಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧವೇ ಸಂತ್ರಸ್ತ ಯುವತಿ ಆರೋಪ ಮಾಡಿದ್ದು, ರಮೇಶ ಜಾರಕಿಹೊಳಿ ಆರೋಪ ಮುಕ್ತರಾಗಿ ಬರುತ್ತಾರೆ ಎಂಬ ಮುಖ್ಯಮಂತ್ರಿಗಳ ಹೇಳಿಕೆ ನನಗೆ ಭಯ ತಂದಿದೆ. ನನ್ನ ಸಹಮತ ಪಡೆಯದೆ ಪಿಪಿ ನೇಮಕ ಮಾಡಲಾಗಿದೆ ಎಂದು ಪತ್ರದಲ್ಲಿ ಹೇಳಿದ್ದಾರೆ.
ಪ್ರಕರಣದ ನಿಷ್ಪಕ್ಷಪಾತವಾಗಿ ತನಿಖೆ ನಡೆಯುತ್ತಿಲ್ಲ. ಈ ಪ್ರಕರಣದ ತನಿಖೆಯ ಮೇಲೆ ನನಗೆ ನಂಬಿಕೆ ಇಲ್ಲವಾಗಿದೆ. ಸರ್ಕಾರದ ಒತ್ತಡಕ್ಕೆ ಮಣಿಯದೆ ನನಗೆ ನ್ಯಾಯ ಕೊಡಿಸಬೇಕು. ನ್ಯಾಯಸಮ್ಮತ ವಿಚಾರಣೆ ನಡೆಸಬೇಕು ಎಂದು ಸಿಡಿ ಯುವತಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಪತ್ರದಲ್ಲಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement