ನಕ್ಸಲರ ಭೀಕರ ದಾಳಿ: ನಾಪತ್ತೆಯಾಗಿದ್ದ 22 ಯೋಧರೂ ಹುತಾತ್ಮ

ರಾಯ್ಪುರ: ನಕ್ಸಲ್ ಪೀಡಿತ ಬಸ್ತಾರ್ ಪ್ರದೇಶದ ಬಿಜಾಪುರ್ ಅರಣ್ಯ ಪ್ರದೇಶದಲ್ಲಿ ಶನಿವಾರ ಭದ್ರತಾ ಪಡೆ ಮತ್ತು ನಕ್ಸಲರ ಮಧ್ಯೆ ನಡೆದ ಗುಂಡಿನ ಕಾಳಗ ನಂತರ ನಾಪತ್ತೆಯಾಗಿದ್ದ 22 ಮಂದಿ ಯೋಧರು ಹುತಾತ್ಮರಾಗಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟರ್ರೆಮ್ ಅರಣ್ಯ ಪ್ರದೇಶದಲ್ಲಿ ನಕ್ಸಲರು ಇರುವ ಕುರಿತು ಮಾಹಿತಿ ಕಲೆಹಾಕಿದ್ದ ನಕ್ಸಲ್ ನಿಗ್ರಹ ಪಡೆ ಸಿಆರ್ ಪಿಎಫ್ ನೊಂದಿಗೆ ಶನಿವಾರ ಜಂಟಿ ಕಾರ್ಯಾಚರಣೆಗೆ ಇಳಿದಿತ್ತು. ಈ ವೇಳೆ ನಕ್ಸಲರ ಅಡಗುತಾಣದ ಮೇಲೆಭದ್ರತಾ ಪಡೆ ನುಗ್ಗುತ್ತಲೇ ಎಚ್ಚೆತ್ತ ನಕ್ಸಲರು ಗುಂಡಿನ ದಾಳಿ ನಡೆಸಿದ್ದರು. ಭದ್ರತಾಪಡೆಗಳು ಹಾಗೂ ನಕ್ಸಲರ ನಡುವೆ ಭಾರೀ ಗುಂಡಿನ ಕಾಳಗ ನಡೆದಿತ್ತು. ಆಗ ಐವರು ಯೋಧರು ಹುತಾತ್ಮರಾಗಿದ್ದರು. ಅಲ್ಲದೆ, 23ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಬಳಿಕ ಗಾಯಗೊಂಡಿದ್ದ ಯೋಧರನ್ನು ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿತ್ತು. ಗಾಯಗೊಂಡಿದ್ದ ಯೋಧರ ಪೈಕಿ ಭಾನುವಾರ ಮೂವರು ಹುತಾತ್ಮರಾಗಿದ್ದು, ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.
ಈ ನಡುವೆ ಎನ್ಕೌಂಟರ್ ಬಳಿಕ 22 ಮಂದಿ ನಾಪತ್ತೆಯಾಗಿದ್ದರು ಎಂದು ಹೇಳಲಾಗುತ್ತಿತ್ತು. ವರದಿಗಳ ಬಳಿಕ ಘಟನಾ ಸ್ಥಳಕ್ಕೆ ಸಿಆರ್’ಪಿಎಫ್ ಡಿಜಿ ಕುಲ್ದೀಪ್ ಸಿಂಗ್ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನಾ ಸ್ಥಳಕ್ಕೆ ಬಿಜಾಪುರ್‌ ಎಸ್’ಪಿ ಕಮಲೋಚನ್ ಕಶ್ಯಪ್ ಭೇಟಿ ನೀಡಿ ಪರಿಶೀಲನೆ ನಡೆಸಿ ಬಳಿಕ ಹೇಳಿಕೆ ನೀಡಿರುವ ಅವರು, ಛತ್ತೀಸ್ಗಢದ ಸುಕ್ಮಾ-ಬಿಜಾಪುರದಲ್ಲಿ ನಕ್ಸಲರು ನಡೆಸಿದ ದಾಳಿಯಲ್ಲಿ 22 ಮಂದಿ ಯೋಧರು ಹುತಾತ್ಮರಾಗಿದ್ದಾರೆಂದು ಹೇಳಿದ್ದಾರೆ.
ಸ್ಥಳದ ವಾಸ್ತವಿಕ ಪರಿಸ್ಥಿತಿ ಗಮನಿಸಿದರೆ, ನಾಪತ್ತೆಯಾಗಿದ್ದ 22 ಮಂದಿ ಭದ್ರತಾ ಪಡೆಗಳು ಹುತಾತ್ಮರಾಗಿದ್ದಾರೆಂದು ತಿಳಿದುಬಂದಿದೆ. ದಾಳಿ ಬಳಿಕ ನಕ್ಸಲರು ಭದ್ರತಾ ಪಡೆಗಳ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡಿ ಕಾಲ್ಕಿತ್ತಿದ್ದಾರೆಂದು ಸಿಆರ್’ಪಿಎಫ್ ಮೂಲಗಳು ಮಾಹಿತಿ ನೀಡಿದೆ.

ಪ್ರಮುಖ ಸುದ್ದಿ :-   ವೀಡಿಯೊ...| ಬೈಕ್​ಗೆ ಡಿಕ್ಕಿ ಹೊಡೆದ ನಂತ್ರ ದೂರ ಎಳೆದೊಯ್ದ ಲಾರಿ..: ಟ್ರಕ್‌ ಹಿಡಿದುಕೊಂಡು ನೇತಾಡುತ್ತಿದ್ದ ಸವಾರ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement