ಭಾನುವಾರ ಕರ್ನಾಟಕದಲ್ಲಿ 4500ಕ್ಕೂ ಹೆಚ್ಚು ಜನರಿಗೆ ಕೊರೋನಾ ಸೋಂಕು,15 ಜನರು ಸಾವು

ಬೆಂಗಳೂರು: ರಾಜ್ಯದಲ್ಲಿ ಭಾನುವಾರು ತಗುಲಿರುವುದು ದೃಢಪಟ್ಟಿದೆ. ಅಲ್ಲದೆ 15 ಜನ ಸೋಂಕಿತರು ಮೃತಪಟ್ಟಿದ್ದಾರೆ.
ಒಟ್ಟು ಸೋಂಕಿತರ ಸಂಖ್ಯೆ 10,15,155 ಕ್ಕೆ ಏರಿಕೆಯಾಗಿದೆ.ಇದುವರೆಗೆ 12,625 ಜನ ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಭಾನುವಾರ 2060 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 9,63,419 ಜನ ಬಿಡುಗಡೆಯಾದಂತಾಗಿದೆ 39,092 ಸಕ್ರಿಯ ಪ್ರಕರಣಗಳಿವೆ
ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ 2787 ಜನರಿಗೆ ಹೊಸದಾಗಿ ಸೋಂಕು ತಗುಲಿರುವ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 4,47,031 ಕ್ಕೆ ಏರಿಕೆಯಾಗಿದ್ದು, ಬೆಂಗಳೂರಿನಲ್ಲಿ 8 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 4649 ಜನ ಸೋಂಕಿತರು ಮೃತಪಟ್ಟಿದ್ದಾರೆ. 1225 ಜನ ಬಿಡುಗಡೆಯಾಗಿದ್ದು, ಇದುವರೆಗೆ 4,14,283 ಜನ ಸೋಂಕಿತರು ಡಿಸ್ಚಾರ್ಜ್ ಆಗಿದ್ದಾರೆ. 28,098 ಸಕ್ರಿಯ ಪ್ರಕರಣಗಳಿವೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ನಿಮ್ಮ ಕಾಮೆಂಟ್ ಬರೆಯಿರಿ

advertisement