ಮಹಾರಾಷ್ಟ್ರದಲ್ಲಿ ಕೊರೊನಾ ಸುನಾಮಿ..ಭಾನುವಾರ 57 ಸಾವಿರ ದಾಟಿದ ದೈನಂದಿನ ಪ್ರಕರಣ..!!!

ಮುಂಬೈ: ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಗೆ ಮಹಾರಾಷ್ಟ್ರ ತತ್ತರಿಸಿ ಹೋಗಿದೆ. ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲೇ 57074 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದಾಖಲಾಗಿದೆ. ಒಂದು ದಿನದಲ್ಲಿ 222 ಮಂದಿ ಮೃತಪಟ್ಟಿದ್ದು, 27,508 ಸೋಂಕಿತರು ಗುಣಮುಖರಾಗಿದ್ದಾರೆ.
ಭಾನುವಾರದ ಅಂಕಿ-ಅಂಶಗಳ ಪ್ರಕಾರ, ಮಹಾರಾಷ್ಟ್ರದಲ್ಲಿ ಈವರೆಗೆ ಒಟ್ಟು 30,10,597 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 25,22,823 ಸೋಂಕಿತರು ಗುಣಮುಖರಾಗಿದ್ದು, 55,878 ಜನರು ಈವರೆಗೆ ಮೃತಪಟ್ಟಿದ್ದಾರೆ. ಇದರ ಹೊರತಾಗಿ ರಾಜ್ಯದಲ್ಲಿ 4,30,503 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಮುಂಬೈನಲ್ಲೇ 11000ಕ್ಕೂ ಹೆಚ್ಚು ಜನರಿಗೆ ಕೊರೊನಾ:ಮಹಾರಾಷ್ಟ್ರದ ಮುಂಬೈನಲ್ಲೇ 24 ಗಂಟೆಗಳಲ್ಲಿ 11,163 ಮಂದಿಗೆ ಕೊರೊನಾವೈರಸ್ ಸೋಂಕು ದಾಖಲಾಗಿದೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 4,52,445ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ 25 ಮಂದಿ ಕೊವಿಡ್-19 ಸೋಂಕಿನಿಂದ ಮೃತಪಟ್ಟಿದ್ದಾರೆ.ಸಾವಿನ ಸಂಖ್ಯೆ 11,776ಕ್ಕೆ ಏರಿಕೆಯಾಗಿದೆ. ಮುಂಬೈನಲ್ಲಿ ಈವರೆಗೂ 3,71,628 ಸೋಂಕಿತರು ಗುಣಮುಖರಾಗಿದ್ದು, 68,052 ಸಕ್ರಿಯ ಪ್ರಕರಣಗಳಿವೆ.

ಪ್ರಮುಖ ಸುದ್ದಿ :-   ಬಿಜೆಪಿ ಸೇರಿದ ದೆಹಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement