ಏಪ್ರಿಲ್ 8 ರಂದು ಸಿಎಂಗಳ ಜೊತೆ ಪ್ರಧಾನಿ ಮೋದಿ ಸಭೆ

ನವ ದೆಹಲಿ: ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ‌ ಹಿನ್ನೆಲೆಯಲ್ಲಿ ಸೋಂಕು ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಕ್ರಮದ ಕುರಿತು ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 8 ರಂದು ರಾಜ್ಯಗಳ ‌ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ವಿಡಿಯೋ ಕಾನ್ಪರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ.
ಮಹಾರಾಷ್ಟ್ರ, ಕರ್ನಾಟಕ, ಕೇರಳ,‌ಪಂಜಾಬ್, ತಮಿಳುನಾಡು, ಚಂಢೀಗಡ,ಛತ್ತೀಸ್ ಗಡ, ದೆಹಲಿ ಪಶ್ವಿಮ‌ ಬಂಗಾಳ ಸೇರಿದಂತೆ 11 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಈ ರಾಜ್ಯಗಳಿಗೆ ವಿಶೇಷ ಸೂಚನೆ ನೀಡುವ ಸಾಧ್ಯತೆ ‌ಇದೆ‌
ದೇಶದ ಇತಿಹಾಸದಲ್ಲಿ ಇದೇ ಮೊದಲ‌ಬಾರಿಗೆ ದಿನವೊಂದಕ್ಕೆ 1 ಲಕ್ಷಕ್ಕೂ ಅಧಿಕ ಮಂದಿಗೆ ಸೋಂಕು ಕಾಣಿಸಿಕೊಂಡಿದೆ.ಇದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತಷ್ಡು ಚಿಂತೆಗೆ ಗುರಿ‌ ಮಾಡಿದೆ. ಈ ಹಿನ್ನೆಲೆಯಲ್ಲಿ ಸೋಂಕು ತಡೆಗಟ್ಟಲು ಕೇಂದ್ರ ಸರ್ಕಾರ. ಹೊರಡಿಸಿವು ಕೊವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನ‌ ಕ್ರಮ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡುವ ಸಾಧ್ಯತೆಗಳಿವೆ.
ಭಾನುವಾರ ಉನ್ನತ ಮಟ್ಟದ ಪರಾಮರ್ಶೆ ‌ಸಭೆ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಕೋವಿಡ್ ಪರೀಕ್ಷೆ, ಪತ್ತೆ, ಚಿಕಿತ್ಸೆ, ಸೂಕ್ತ ವರ್ತನೆ ಪಾಲನೆ ಹಾಗೂ ಲಸಿಕೆ ನೀಡಿಕೆ ಪ್ರಮಾಣ ಹೆಚ್ಚಳ‌ ಮಾಡುವಂತೆ ಸೂಚಿಸಿದ್ದರು.

ಪ್ರಮುಖ ಸುದ್ದಿ :-   ಇದೆಂಥ ಪವಾಡ...| ಒಂದೇ ಗೋಡೆ, 4 ಲೀಟರ್ ಬಣ್ಣ ಬಳಿಯಲು 233 ಕೆಲಸಗಾರರ ಬಳಕೆ...! ಶಾಲೆಯ ಗುತ್ತಿಗೆದಾರನ ಬಿಲ್ ವೈರಲ್‌

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement