ಎಸ್‌ಐಟಿ ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಕೊರೊನಾ ನೆಪವೇ: ಟ್ವೀಟ್‌ ಮೂಲಕ ಕಾಂಗ್ರೆಸ್‌ ಪ್ರಶ್ನೆ

ಬೆಂಗಳೂರು: ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂಬುದನ್ನು ಕಾಂಗ್ರೆಸ್‌ ಲೇವಡಿ ಮಾಡಿದ್ದು, ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಕೊರೊನಾ ಹೆಸರಿನ ನೆಪವೇ ಎಂದು ಪ್ರಶ್ನಿಸಿದೆ.
ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಅವರು ಸೋಮವಾರ ಎಸ್‌ಐಟಿ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಭಾನುವಾರ ರಾತ್ರಿ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು ಅವರ ಬಿಪಿ, ಶುಗರ್ ನಲ್ಲಿ ಏರುಪೇರಾಗಿದ್ದರಿಂದ ಚಿಕಿತ್ಸೆ ನೀಡಲಾಗುತ್ತಿದೆ. ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವುದರಿಂದ ಕೋವಿಡ್ ನಿಯಮದಂತೆ 5 ದಿನಗಳ ಕಾಲ ಆಸ್ಪತ್ರೆಯಲ್ಲಿ ಉಳಿಯಬೇಕಾಗುತ್ತದೆ ಎಂದು ಗೋಕಾಕ್ ತಾಲೂಕು ಆಸ್ಪತ್ರೆಯ ವೈದ್ಯ ಡಾ. ರವೀಂದ್ರ ಹೇಳಿದ್ದರು.
ಇದಕ್ಕೆ ಕಾಂಗ್ರೆಸ್‌ ರಮೇಶ್ ಜಾರಕಿಹೊಳಿ ಎಸ್‌ಐಟಿ ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಕೊರೊನಾ ನೆಪ ಹೇಳುತ್ತಿದ್ದಾರೆಯೇ ಎಂದು ಕೇಳಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಭೀಮಾ ಕೊರೆಗಾಂವ್ ಪ್ರಕರಣದಲ್ಲಿ ದಲಿತಪರ ಧ್ವನಿಗಳಾಗಿದ್ದ ಚಿಂತಕರ ವೃದ್ಧಾಪ್ಯ ಲೆಕ್ಕಿಸದೆ, ಅನಾರೋಗ್ಯವನ್ನೂ ಪರಿಗಣಿಸದೆ ಕ್ರೂರವಾಗಿ ನಡೆಸಿಕೊಂಡ ಬಿಜೆಪಿ ಪಕ್ಷದ ಈಗ ಅತ್ಯಾಚಾರ ಆರೋಪಿಗೆ ಅನಾರೋಗ್ಯದ ನೆಪ ಹೇಳುವುದು ಹಾಸ್ಯಾಸ್ಪದ. “ಕಳ್ಳನಿಗೊಂದು ಪಿಳ್ಳೆ ನೆಪ”!! ಎಂದು ಟ್ವೀಟ್ ಮಾಡಿದೆ.

ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement