ಕರ್ನಾಟಕದಲ್ಲಿ 5 ಸಾವಿರ ದಾಟಿದ ದೈನಂದಿನ ಕೊರೊನಾ ಸೋಂಕು..ಬೆಂಗಳೂರಿನದೇ ಸಿಂಹಪಾಲು..!

ಬೆಂಗಳೂರು: ರಾಜ್ಯದಲ್ಲಿ ಸೋಮವಾರ ಕೊರೋನಾ ಹೆಚ್ಚಳ ಮುಂದುವರಿದಿದೆ. ಒಂದೇ ದಿನ 5279 ಜನರಿಗೆ ಸೋಂಕು ದೃಢಪಟ್ಟಿದೆ. ಸೋಮವಾರ ಒಂದೇ ದಿನಕ್ಕೆ 32 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10,20,434 ಕ್ಕೆ ಏರಿಕೆಯಾಗಿದೆ.ಹಾಗೂ ಒಟ್ಟು ಮೃತಪಟ್ಟವರ ಸಂಖ್ಯೆ ಮೃತಪಟ್ಟ ಸೋಂಕಿತರ ಸಂಖ್ಯೆ 12,657 ಕ್ಕೆ ಏರಿಕೆಯಾಗಿದೆ. ಒಂದೇ ದಿನ 1856 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 9,65,275 ಜನ ಸೋಂಕಿತರು ಗುಣಮುಖರಾಗಿಬಿಡುಗಡೆಯಾಗಿದ್ದಾರೆ.ರಾಜ್ಯದಲ್ಲಿ 42,483 ಸಕ್ರಿಯ ಪ್ರಕರಣಗಳು ಇದ್ದು, 345 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಒಂದೇ ದಿನ 3728 ಜನರಿಗೆ ಸೋಂಕು ತಗುಲಿದೆ. 18 ಮಂದಿ ಸೋಂಕಿತರು ಮೃತಪಟ್ಟಿದ್ದು, 30,782 ಸಕ್ರಿಯ ಪ್ರಕರಣಗಳು ಇವೆ. ರಾಜ್ಯದಲ ಒಟ್ಟು ಪ್ರಕರಣಗಳಲ್ಲಿ ಶೇ.65ರಷ್ಟು ಬೆಂಗಳೂರಲ್ಲಿಯೇ ದಾಖಲಾಗುತ್ತಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ನಿಮ್ಮ ಕಾಮೆಂಟ್ ಬರೆಯಿರಿ

advertisement