ಕೊರೊನಾ ಹೆಚ್ಚಳ; ಬಾಂಗ್ಲಾದೇಶದಲ್ಲಿ ಒಂದು ವಾರ ಲಾಕ್‌ಡೌನ್‌

ಢಾಕಾ: ನೆರೆಯ ರಾಷ್ಟ್ರವಾದ ಬಾಂಗ್ಲಾದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು 7 ದಿನಗಳ ಕಾಲ ಲಾಕ್‍ಡೌನ್ ಘೋಷಣೆ ಮಾಡಲಾಗಿದೆ.
ಲಾಕ್‍ಡೌನ್ ಅವಧಿಯಲ್ಲಿ ಸಾರಿಗೆ ವ್ಯವಸ್ಥೆ, ಮಾರುಕಟ್ಟೆ ಸೇರಿದಂತೆ ಎಲ್ಲಾ ಚಟುವಟಿಕೆಗಳು ಸ್ಥಗಿತಗೊಳ್ಳಲಿವೆ. ಸೋಮವಾರ ಬೆಳಗ್ಗೆ 6ಗಂಟೆಯಿಂದ ಲಾಕ್‌ಡೌನ್‌ ಆರಂಭವಾಗಿದ್ದು, ಏ.11ರ ಮಧ್ಯರಾತ್ರಿ 12 ಗಂಟೆವರೆಗೂ ಲಾಕ್‍ಡೌನ್ ಜಾರಿಯಲ್ಲಿರಲಿದೆ.
ಸೋಂಕು ಹರಡುವುದನ್ನು ತಡೆಗಟ್ಟುವುದು ಮತ್ತು ಸಾವಿನ ಪ್ರಮಾಣ ನಿಯಂತ್ರಿಸಲು ಲಾಕ್‍ಡೌನ್ ಅನಿವಾರ್ಯವಾಗಿದೆ ಎಂದು ಬಾಂಗ್ಲಾ ಸರ್ಕಾರ ತಿಳಿಸಿದೆ. ಹೊಸದಾಗಿ 7087 ಮಂದಿಗೆ ಸೋಂಕು ತಗುಲಿದ್ದು, ಒಟ್ಟು 6,37ಸಾವಿರ ಮಂದಿ ಸೋಂಕಿತರಿದ್ದಾರೆ.
53 ಮಂದಿ ಹೊಸದಾಗಿ ಮೃತಪಟ್ಟಿದ್ದಾರೆ. ಈವರೆಗೂ ಬಾಂಗ್ಲಾದೇಶದಲ್ಲಿ 9266 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಬಾಂಗ್ಲಾದೇಶ ಲಾಕ್‍ಡೌನ್ ಘೋಷಣೆ ಮಾಡಲಾಗಿದೆ. ಕಳೆದ ವರ್ಷ ಮಾರ್ಚ್ 26ರಿಂದ ಮೇ 30ರವರೆಗೆ 66 ದಿನಗಳ ಲಾಕ್‍ಡೌನ್ ಫೋಷಣೆ ಮಾಡಲಾಗಿತ್ತು.

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement