ಡಿನೋಟಿಫಿಕೇಷನ್ ಪ್ರಕರಣದ ತನಿಖೆಗೆ ‘ಸುಪ್ರೀಂಕೋರ್ಟ್’ ತಡೆ :ಸಿಎಂ ಬಿಎಸ್ ವೈಗೆ ಬಿಗ್ ರಿಲೀಫ್;

ನವ ದೆಹಲಿ: ಅಕ್ರಮ ಡಿನೋಟಿಫಿಕೇಷನ್ ಪ್ರಕರಣದಡಿ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ಎದುರಿಸುತ್ತಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧದ ಬೆಂಗಳೂರಿನ ಬೆಳ್ಳಂದೂರು ಬಳಿಯ 24 ಎಕರೆ ಭೂಮಿಯ ಡಿನೋಟಿಫಿಕೇಷನ್ ಪ್ರಕರಣದ ವಿಚಾರಣೆಗೆ ಸುಪ್ರೀಂಕೋರ್ಟ್ ಸಿಜೆಐ ಪೀಠ ತಡೆಯಾಜ್ಞೆ ನೀಡಿದೆ. ಈ ಹಿಂದೆ ಇದೇ ಪ್ರಕರಣದ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ ಪ್ರಕರಣ ರದ್ದುಪಡಿಸಲು ನಿರಾಕರಿಸಿತ್ತು. ಆದರೆ ಈ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಯಡಿಯೂರಪ್ಪ ಅವರ ಪರ ವಕೀಲರು ಅರ್ಜಿ ಸಲ್ಲಿಸಿದ್ದರು.
ಇದೀಗ ಸುಪ್ರೀಂ ಕೋರ್ಟ್ ತನಿಖೆಗೆ ತಡೆ ನೀಡಿದೆ. ಐಟಿ ಯೋಜನೆಯೊಂದಕ್ಕೆ ಸ್ವಾಧೀನಪಡಿಸಿಕೊಂಡಿದ್ದ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದ ಆರೋಪವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಎದುರಿಸುತ್ತಿದ್ದಾರೆ. 2011ರಲ್ಲಿ ಉದ್ಯಮಿ ಅಲಂ ಪಾಷಾ ದೂರು ಸಲ್ಲಿಸಿದ್ದರು. ಲೋಕಾಯುಕ್ತ ಕೋರ್ಟ್‌ನ ಮೇಲ್ವಿಚಾರಣೆಯಲ್ಲಿ ಪ್ರಕರಣದ ತನಿಖೆ ನಡೆಸಲು ಹೈಕೋರ್ಟ್ ಆದೇಶ ನೀಡಿತ್ತು.
ಈ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಯಡಿಯೂರಪ್ಪ ವಿರುದ್ಧರು. ಈ ಪ್ರಕರಣದಲ್ಲಿ ಬಿಜೆಪಿ ನಾಯಕ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸಹ ಆರೋಪ ಎದುರಿಸುತ್ತಿದ್ದಾರೆ.

ಪ್ರಮುಖ ಸುದ್ದಿ :-   ಶ್ರೀರಂಗಪಟ್ಟಣ: ಐಸ್‌ ಕ್ರೀಂ ತಿಂದ ಬಳಿಕ ಅವಳಿ ಮಕ್ಕಳ ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement