ದೇವೇ ಗೌಡ ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು : ಕೊರೊನಾ ಸೋಂಕಿನಿಂದಾಗಿ ನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನಲೆಯಲ್ಲಿ ಸೋಮವಾರ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಎರಡು ದಿನಗಳ ಹಿಂದೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ಹೀಗಾಗಿ ನಗರ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಗೆ ದಾಖಲಾದ ನಂತರ ಕೊರೊನಾ ಪರೀಕ್ಷೆಗೆ ಒಳಪಡಿಸಿದಾಗ ದೇವೇಗೌಡರಿಗೆ ಕೊರೊನಾ ನೆಗೆಟಿವ್ ಬಮದರೆ, ಚೆನ್ನಮ್ಮ ಅವರಿಗೆ ಪಾಸಿಟಿವ್ ಎಂದು ಬಂದಿತ್ತು.
ಈ ಬಳಿಕ ಮತ್ತೊಮ್ಮೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಿದಾಗ, ಅವರಿಗೆ ಪಾಸಿಟಿವ್ ದೃಡ ಪಟ್ಟಿತ್ತು. ಹೀಗಾಗಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಈಗ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement