ಬೆಂಗಳೂರು: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಏಪ್ರಿಲ್ 6 ರಿಂದ 10ರ ವರೆಗೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಏಪ್ರಿಲ್ 6ರಂದು ಮೈಸೂರು, ಹಾಸನ, ಕೊಡಗು, ಚಾಮರಾಜನಗರ, ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದ್ದು, ಏಪ್ರಿಲ್ 7 ರಂದು ಕರಾವಳಿ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡು ಭಾಗದ ಚಾಮರಾಜನಗರ, ಹಾಸನ, ಮೈಸೂರು, ಕೊಡಗು ಭಾಗದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಒಣಹವೆ ಇರಲಿದೆ ಎನ್ನುವ ಮುನ್ಸೂಚನೆ ನೀಡಿದೆ.
ಏಪ್ರಿಲ್ 8 ರಂದು ಕರಾವಳಿ ಹಾಗೂ ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಕೊಡಗು, ಹಾಸನದಲ್ಲಿ ಮಳೆಯಾಗುವ ಸಂಭವವಿದೆ. ಏಪ್ರಿಲ್ 9 ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಧಾರವಾಡ, ಕಲಬುರಗಿ, ಬೆಳಗಾವಿ, ಶಿವಮೊಗ್ಗ, ಮೈಸೂರು, ಕೊಡಗು, ರಾಯಚೂರು, ಹಾಸನ, ಚಿಕ್ಕಮಗಳೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.
ಏಪ್ರಿಲ್ 10 ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕಲಬುರಗಿ, ರಾಯಚೂರು, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ನಿಮ್ಮ ಕಾಮೆಂಟ್ ಬರೆಯಿರಿ