ಮಾಜಿ ಸಚಿವ ರಮೇಶ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢ:ಗೋಕಾಕ ಟಿಎಚ್ಒ‌

ಗೋಕಾಕ್ : ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರಿಗೂ ಏಪ್ರಿಲ್ 1ರಂದು ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಭಾನುವಾರ ಗೋಕಾಕ್ ತಾಲೂಕು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು ಎಂಬುದಾಗಿ ಗೋಕಾಕ್ ತಾಲೂಕು ವೈದ್ಯಾಧಿಕಾರಿ ಡಾ.ರವೀಂದ್ರ ಸ್ಪಷ್ಟ ಪಡಿಸಿದ್ದಾರೆ.
ಈ ಕುರಿತು ಮಾಧ್ಯಮದವರಿಗೆ ಮಾಹಿತಿ ನೀಡಿದ ಅವರು, ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ಏಪ್ರಿಲ್ 1ರಂದು ದೃಢಪಟ್ಟಿತ್ತು. ಇದುವರೆಗೆ ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು, ನಿನ್ನೆ ರಾತ್ರಿ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು ಅವರ ಬಿಪಿ, ಶುಗರ್ ನಲ್ಲಿ ಏರುಪೇರಾಗಿದ್ದರಿಂದ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಅವರಿಗೆ ಕೊರೋನಾ ಸೋಂಕು ದೃಢಪಟ್ಟಿರುವುದರಿಂದ ಕೋವಿಡ್ ನಿಯಮದಂತೆಐಸೋಲೇಷನ್ ನಲ್ಲಿ ಇರಬೇಕಾಗುತ್ತದೆ ಎಂದು ಗೋಕಾಕ್ ತಾಲೂಕು ಆಸ್ಪತ್ರೆಯ ವೈದ್ಯ ಡಾ. ರವೀಂದ್ರ ಹೇಳಿದ್ದಾರೆ.
ಸಿಡಿ ಪ್ರಕರಣ ಸಂಬಂಧ ಸೋಮವಾರ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಎಸ್‌ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಈ ಹಿಂದೆ ಜ್ವರ ಬಂದು, ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ, ವಿಚಾರಣೆಗೆ ಹಾಜರಾಗುತ್ತಿಲ್ಲ ಎಂಬುದಾಗಿ ಎಸ್‌ಐಟಿ ಅಧಿಕಾರಿಗಳಿಗೆ ತಮ್ಮ ವಕೀಲರ ಮೂಲಕ ಪತ್ರದಲ್ಲಿ ತಿಳಿಸಿದ್ದರು. ಈ ನಂತರ ಸೋಮವಾರ ಅವರಿಗೆ ಕೊರೊನಾ ಸೋಂಕು ಎಂಬುದು ದೃಢಪಟ್ಟಿದೆ. ಹೀಗಾಗಿ ಸದ್ಯಕ್ಕೆ ವಿಚಾರಣೆಗೆ ಹಾಜರಾಗುವುದು ಅನುಮಾನ ಎನ್ನಲಾಗುತ್ತಿದೆ.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ : ಕರ್ನಾಟಕದ ಮೊದಲ ಹಂತದಲ್ಲಿ ಶೇ. 69.23 ಮತದಾನ ; 14 ಕ್ಷೇತ್ರಗಳ ಮತದಾನದ ಪ್ರಮಾಣದ ವಿವರ...

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement