ಮಹಾರಾಷ್ಟ್ರದಲ್ಲಿ ಕೊರೊನಾ ದಿಢೀರ್‌ ಹೆಚ್ಚಳ: ಕರ್ನಾಟಕದಲ್ಲೂ ಕಠಿಣ ಕ್ರಮದ ಮುನ್ಸೂಚನೆ ನೀಡಿದ ಸಚಿವ ಸುಧಾಕರ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಜಾರಿಗೊಳಿಸುವುದು ಅನಿವಾರ್ಯ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಕೊವಿಡ್-19 ಸೋಂಕಿನ ಅಟ್ಟಹಾಸ ಹೆಚ್ಚಾಗಿದೆ. ಶನಿವಾರ ಒಂದೇ ದಿನ ಆ ರಾಜ್ಯದಲ್ಲಿ 50 ಸಾವಿರಕ್ಕೂ ಹೆಚ್ಚು ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ ಎಂದರು.
ಕೊರೊನಾ ವೈರಸ್ ಸೋಂಕಿನ ಹೊಡೆತಕ್ಕೆ ಮಹಾರಾಷ್ಟ್ರ ತತ್ತರಿಸಿ ಹೋಗಿದೆ. ಕಳೆದ 24 ಗಂಟೆಗಳಲ್ಲೇ 500ಕ್ಕೂ ಹೆಚ್ಚು ಜನರು ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. ಮಹಾರಾಷ್ಟ್ರದ ಪರಿಸ್ಥಿತಿ ರಾಜ್ಯದಲ್ಲಿ ಎದುರಾಗದಂತೆ ಮುಂಜಾಗ್ರತೆ ವಹಿಸಬೇಕಿದ್ದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲೇಬೇಕು. ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ಕೊರೊನಾ ನಿಯತಂತ್ರಣ ಕಷ್ಟವಾಗಬಹುದು ಎಂದು ಸಚಿವ ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.
ಕೊರೊನಾ ವೈರಸ್ ಸೋಂಕಿನ ಹರಡುವಿಕೆ ಕುರಿತು ಆರೋಗ್ಯ ಇಲಾಖೆ ಮತ್ತು ತಾಂತ್ರಿಕ ಸಲಹಾ ಸಮಿತಿಯು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಈ ವರದಿ ಆಧರಿಸಿಯೇ ಕರ್ನಾಟಕದಲ್ಲಿ ಕಠಿಣ ನಿಯಮ ಜಾರಿಗೊಳಿಸಬೇಕಾದ ಅನಿವಾರ್ಯತೆಯಿದೆ. ಯಾಕೆಂದರೆ ಎರಡನೇ ಅಲೆ ವೈರಸ್ಸು ನಿರೀಕ್ಷೆಗೂ ಮೀರಿ ವೇಗವಾಗಿ ಹರಡುತ್ತಿದೆ. ಇದಕ್ಕೆ ಮಹಾರಾಷ್ಟ್ರವೇ ಸಾಕ್ಷಿ. ಹೀಗಾಗಿ ನಾವು ಕಠಿಣ ಕ್ರಮ ಕೈಗೊಂಡು ಸವಾಲನ್ನು ಎಉದರಿಸುವ ಸ್ಥಿತಿಯಲ್ಲಿದ್ದೇವೆ ಎಂದು ತಿಳಿಸಿದರು.
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲೇ 4373 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 19 ಮಂದಿ ಮೃತಪಟ್ಟಿದ್ದು, , ಸಾವಿನ ಸಂಖ್ಯೆ 12610ಕ್ಕೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ 1959 ಸೋಂಕಿತರು ಗುಣಮುಖರಾಗಿದ್ದಾರೆ. ಗುಣಮುಖರಾಗಿದ್ದು, 36,614 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಪ್ರಮುಖ ಸುದ್ದಿ :-   ದೆಹಲಿಯಲ್ಲಿ ಮತ್ತೆ ಕಾಂಗ್ರೆಸ್ಸಿಗೆ ಆಘಾತ : ಪಕ್ಷಕ್ಕೆ ರಾಜೀನಾಮೆ ನೀಡಿದ ಇಬ್ಬರು ಹಿರಿಯ ನಾಯಕರು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement