ನಾಳೆ ಸಾರಿಗೆ ನೌಕರರ ಮುಷ್ಕರ, ಕಠಿಣ ಕ್ರಮಕ್ಕೆ ಮುಂದಾದ ಸರ್ಕಾರ

posted in: ರಾಜ್ಯ | 0

ಬೆಂಗಳೂರು: ತಮ್ಮ ಬೇಡಿಕೆಗಳು ಈಡೇರದ ಕಾರಣಕ್ಕೆ ಏ.೭ರಂದು ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ಮುಂದಾಗಿದ್ದಾರೆ. ಹೀಗಾಗಿ ಬಸ್‌ ಸಂಚಾರಬಹುತೇಕ ಸ್ಥಗಿತಗೊಳ್ಳುವ ಸಾಧ್ಯತೆಯಿದೆ.
ಸರ್ಕಾರವು ಮುಷ್ಕರವನ್ನು ಹಿಂಪಡೆಯುವಂತೆ ಸಾರಿಗೆ ನೌಕರರಲ್ಲಿ ಮಾತುಕತೆ ನಡೆಸಿದರೂ ವಿಫಲವಾಗಿದ್ದು, ಹೀಗಾಗಿ ಸರ್ಕಾರವು ಮುಷ್ಕರ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ. ಜೊತೆಗೆ ಸದ್ಯದ ಸ್ಥಿತಿಯಲ್ಲಿ ಸಾರಿಗೆ ನೌಕರರಿಗೆ 6ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿ ಮಾಡಲು ಸಾಧ್ಯವಿಲ್ಲ ಎಂದು ಹೇಳಿದೆ.
ಮಂಳವಾರ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಈ ಕುರಿತು ಮಹತ್ವದ ಸಭೆ ನಡೆಯಿತು. ಮುಖ್ಯ ಕಾರ್ಯದರ್ಶಿ, ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಉನ್ನತ ಅಧಿಕಾರಿಗಳು ಪಾಲ್ಗೊಡಿದ್ದರು.
ನಂತರ ಈ ಕುರಿತು ಮಾಧ್ಯಮದವರ ಜೊತೆ ಮಾತನಾಡಿದ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್‌ , ಮುಷ್ಕರದಿಂದ ಉಂಟಾಗುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದಿದ್ದಾರೆ.
“ಖಾಸಗಿ ವಾಹನಗಳಿಗೆ ತಾತ್ಕಾಲಿಕವಾಗಿ ಪರವಾನಿಗೆ ಕೊಡಲಾಗುವುದು. ದೂರದ ಪ್ರಯಾಣಕ್ಕಾಗಿ ಬಂದಿರುವ ಪ್ರಯಾಣಿಕರಿಗೆ ವಿಶೇಷ ರೈಲುಗಳ ವ್ಯವಸ್ಥೆ ಮಾಡಲು ರೈಲ್ವೇ ಇಲಾಖೆಗೆ ಮನವಿ ಮಾಡಲಾಗಿದೆ, ಎಂದು ಅವರು ಹೇಳಿದ್ದಾರೆ.
ಈಗ ರಾಜ್ಯದಲ್ಲಿ ಉಪಚುನಾವಣೆಗಳು ನಡೆಯುತ್ತಿರುವುದರಿಂದ, ಯಾವುದೇ ಮಹತ್ವದ ಘೋಷಣೆ ಮಾಡಲು ಸಾಧ್ಯವಿಲ್ಲ. ಸಾರಿಗೆ ನೌಕರರಿಗೆ 8% ವೇತನ ಹೆಚ್ಚಳಕ್ಕೆ ನಿರ್ಧಾರ ಮಾಡಲಾಗಿದೆ. ಈ ಕುರಿತಾಗಿ ಅನುಮತಿ ಕೋರಿ ಚುನಾವಣಾ ಆಯೋಗಕ್ಕೂ ಮನವಿ ಸಲ್ಲಿಸಲಾಗಿದೆ. ಜನರಿಗೆ ತೊಂದರೆ ಉಂಟಾಗದಂತೆ ಎಸ್ಮಾ ಜಾರಿಗೊಳಿಸುವುದು ಸೇರಿ ಎಲ್ಲಾ ರೀತಿಯ ಕಠಿಣ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಸಿದ್ದವಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರಕ್ಕೆ ಸಂಬಂಧಿಸಿದಂತೆ ಬೃಹತ್‌ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು. ಏಪ್ರಿಲ್‌ ೭ರಿಂದ ನೌಕರರ ಅನಿರ್ದಿಷ್ಟಾವಧಿಯ ಮುಷ್ಕರದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜನರಿಗೆ ಸಾರಿಗೆ ವ್ಯವಸ್ಥೆಯಲ್ಲಿ ಯಾವುದೇ ಆಡಚಣೆಯಾಗದಂತೆ ನೋಡಿಕೊಳ್ಳುವ ಸಲುವಾಗಿ ಸಾರಿಗೆ ನೌಕರರಿಗೆ ಸಂಸ್ಥೆ ಕೆಲವು ನಿರ್ದೇಶನ ನೀಡಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ವಿದ್ಯುತ್ ದರ ಏರಿಕೆ: ಹಿಂಪಡೆಯಲು ರಾಜ್ಯ ಸರ್ಕಾರದ ಚಿಂತನೆ...?

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement