ಮಹಾರಾಷ್ಟ್ರದಲ್ಲಿ ಮಂಗಳವಾರ 55 ಸಾವಿರಕ್ಕೂ ಹೆಚ್ಚು ದೈನಂದಿನ ಪ್ರಕರಣ..!

ಮುಂಬೈ; ಮಹಾರಾಷ್ಟ್ರದಲ್ಲಿ ಮಂಗಳವಾರ (ಏಪ್ರಿಲ್ 6) ಕಳೆದ ವರ್ಷ ಸಾಂಕ್ರಾಮಿಕ ರೋಗ ಹರಡಿದ ನಂತರ ಎರಡನೇ ಅತಿ ಹೆಚ್ಚು ಏಕದಿನ ಏರಿಕೆ ದಾಖಲಿಸಿದೆ. ಮಂಗಳವಾರ 55,469 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ರಾಜ್ಯದ ಅತಿ ಹೆಚ್ಚು ಏಕದಿನ ಸ್ಪೈಕ್ 57,074 ಆಗಿದ್ದು, ಇದು ಭಾನುವಾರ (ಏಪ್ರಿಲ್ 4) ವರದಿಯಾಗಿದೆ.ದಿನದಲ್ಲಿ 297 ಸಾವುಗಳು ದಾಖಲಾಗಿದ್ದು, ಸಾವಿನ ಸಂಖ್ಯೆ 56,330 ಕ್ಕೆ ತಲುಪಿದೆ. ರಾಜ್ಯದಲ್ಲಿ ಸಾವಿನ ಪ್ರಮಾಣ ದರ 1.81%.
ದಿನದಲ್ಲಿ 34,256 ರೋಗಿಗಳನ್ನು ಬಿಡುಗಡೆ ಮಾಡಲಾಗಿದ್ದು,ಬಿಡುಗಡೆಯಾದವರ ಸಂಖ್ಯೆ 25,83,331 ಕ್ಕೆ ತಲುಪಿದೆ. ರಾಜ್ಯದಲ್ಲಿ ಚೇತರಿಕೆ ಪ್ರಮಾಣ 82.98% ರಷ್ಟಿದೆ. ಮಹಾರಾಷ್ಟ್ರದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 4,72,283.ಮುಂಬೈ ವಲಯ ಮಂಗಳವಾರ 18,579 ಹೊಸ ಪ್ರಕರಣಗಳನ್ನು ದಾಖಲಿಸಿದೆ.ನಾಸಿಕ್ ವಲಯ 9202, ಪುಣೆ ವಲಯ 12331 ಹೊಸ ಪ್ರಕರಣಗಳು ದಾಖಲಾಗಿವೆ.
ಏತನ್ಮಧ್ಯೆ, ಮಹಾರಾಷ್ಟ್ರ, ಛತ್ತೀಸ್‌ಗಡ ಮತ್ತು ಪಂಜಾಬ್‌ನಲ್ಲಿ 50 ಉನ್ನತ ಮಟ್ಟದ ಸಾರ್ವಜನಿಕ ಆರೋಗ್ಯ ತಂಡಗಳನ್ನು ಕಳುಹಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ” ಅವರು ಮಹಾರಾಷ್ಟ್ರದ 30 ಜಿಲ್ಲೆಗಳು,ಛತ್ತೀಸ್‌ಗಡದ 11 ಜಿಲ್ಲೆಗಳು ಮತ್ತು ಪಂಜಾಬ್‌ನ 9 ಜಿಲ್ಲೆಗಳಿಗೆ ಹೋಗಲಿದ್ದಾರೆ” ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಇವರು ಭಾರತದ ಅತ್ಯಂತ ಶ್ರೀಮಂತ ಅಭ್ಯರ್ಥಿ : ತೆಲುಗು ದೇಶಂ ಪಕ್ಷದ ಇವರ ಆಸ್ತಿ 5,785 ಕೋಟಿ ರೂಪಾಯಿ...!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement