ಯುದ್ಧ ವಿಮಾನ ರಫೇಲ್ ಡೀಲ್ ನಲ್ಲೂ ಮಧ್ಯವರ್ತಿಗೆ ಕಿಕ್ ಬ್ಯಾಕ್ ಆರೋಪ

ನವ ದೆಹಲಿ: ಭಾರತ-ಫ್ರಾನ್ಸ್ ನಡುವಿನ ರಫೇಲ್ ಯುದ್ಧ ವಿಮಾನ ಒಪ್ಪಂದದ ಕುರಿತು ಮತ್ತೆ ವಿವಾದ ಭುಗಿಲೆದ್ದಿದೆ.
ರಫೇಲ್ ಯುದ್ಧ ವಿಮಾನ ತಯಾರಿಕಾ ಸಂಸ್ಥೆ ಡಸಾಲ್ಟ್ ಏವಿಯೇಷನ್ ಭಾರತೀಯ ಮಧ್ಯವರ್ತಿಗೆ ಒಂದು ಮಿಲಿಯನ್ ಯುರೋ ಲಂಚ ನೀಡಿದೆ ಎಂಬ ಆರೋಪ ಕೇಳಿ ಬಂದಿದ್ದು ಇದು ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಫ್ರಾನ್ಸ್ ಮೂಲದ ‘ಮಿಡಿಯಾ ಪಾರ್ಟ್’ ಎಂಬ ಸಂಸ್ಥೆ ಈ ಬಗ್ಗೆ ವರದಿ ಮಾಡಿದ್ದು, ಭಾರತ ಮತ್ತು ಫ್ರಾನ್ಸ್ ನಡುವಿನ ಸುಮಾರು 58 ಸಾವಿರ ಕೋಟಿ ರೂ ವೆಚ್ಚದಲ್ಲಿ 36 ರಫೇಲ್ ಜೆಟ್ ಖರೀದಿಗೆ 2016ರಲ್ಲಿ ಒಪ್ಪಂದ ಮಾಡಿಕೊಳ್ಳಲಾಗಿತ್ತು. ರಫೇಲ್ ತಯಾರಿಕಾ ಸಂಸ್ಥೆ ಡಸಾಲ್ಟ್, 36 ರಫೇಲ್‌ ಯುದ್ಧ ವಿಮಾನ ಖರೀದಿಗೆ ಭಾರತವನ್ನು ಒಪ್ಪಿಸಲು ಭಾರತದ ಮಧ್ಯವರ್ತಿಯೊಬ್ಬರಿಗೆ ಒಂದು ಮಿಲಿಯನ್ ಯೂರೋ ಪಾವತಿಸಿದೆ ಎಂದು ಫ್ರಾನ್ಸ್‌ನ ಭ್ರಷ್ಟಾಚಾರ ವಿರೋಧಿ ಸಂಸ್ಥೆ (ಎಎಫ್ಎ) ತನಿಖೆ ಉಲ್ಲೇಖಿಸಿ ಮಿಡಿಯಾ ಪಾರ್ಟ್ ವರದಿ ಮಾಡಿದ ನಂತರ ಈಗ ಈ ವಿಷಯ ಈಗ ಭಾರತದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
ಇದೇ ಮಧ್ಯವರ್ತಿ ಬೇರೊಂದು ರಕ್ಷಣಾ ಒಪ್ಪಂದದ ಮತ್ತೊಂದು ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿದ್ದಾರೆ ಎಂದು ಮಿಡಿಯಾ ಪಾರ್ಟ್ ವರದಿ ಹೇಳಿದೆ.
ಡಸಾಲ್ಟ್ ಸಂಸ್ಥೆ ಒಪ್ಪಂದ ಕುದುರಿಸಲು ಭಾರತೀಯ ಮಧ್ಯವರ್ತಿಯೋರ್ವನಿಗೆ ಒಂದು ಮಿಲಿಯನ್ ಯುರೋ ಲಂಚ ನೀಡಿದ್ದರ ಕುರಿತು ರಫೇಲ್ ಜೆಟ್‌ಗಳ 50 ದೊಡ್ಡ ಮಾದರಿಗಳ ತಯಾರಿಕೆಗಾಗಿ ಈ ಹಣ ಬಳಸಲಾಗಿದೆ. ಇದು ಲಂಚವಲ್ಲ ಎಂದು ಡಸಾಲ್ಟ್ ಹೇಳಿದೆ. ಆದರೆ ಇವುಗಳನ್ನು ತಯಾರಿಸಿರುವ ಕುರಿತು ಕಂಪನಿ ಎಎಫ್ಎಗೆ ಯಾವುದೇ ಪುರಾವೆ ಒದಗಿಸಿಲ್ಲ. ಕಂಪನಿಯ ವಾರ್ಷಿಕ ಲೆಕ್ಕಪರಿಶೋಧನೆಯ ಸಮಯದಲ್ಲಿ ಇದು ಬೆಳಕಿಗೆ ಬಂದಿದ್ದು ಈ ಬಗ್ಗೆ ತನಿಖೆ ಮಾಡಿದಾಗ, ವರದಿಯಲ್ಲಿ ‘ಗ್ರಾಹಕರಿಗೆ ಉಡುಗೊರೆಗಳು’ ಎಂಬ ಉಲ್ಲೇಖವಿರುವುದು ಎಎಫ್ಎ ಗಮನ ಸೆಳೆದಿದೆ. ಈ ಕುರಿತು ತನಿಖೆ ನಡೆಸಿದಾಗ ಒಂದು ಮಿಲಿಯನ್ ಯುರೋ ಇದಕ್ಕಾಗಿ ಖರ್ಚು ಮಾಡಲಾಗಿದೆ ಎಂಬ ಅಂಶ ಬಯಲಾಗಿತ್ತು ಎಂದು ವರದಿಯಲ್ಲಿ ಹೇಳಲಾಗಿದೆ.
ಮಿಡಿಯಾಪಾರ್ಟ್ ವರದಿಯಲ್ಲಿರುವ ಮಧ್ಯವರ್ತಿಯ ಹೆಸರು ಸುಶೇನ್ ಗುಪ್ತಾ ಇರಬಹುದು ಎಂದು ಅನುಮಾನಿಸಲಾಗಿದೆ. ಯಾಕೆಂದರೆ ಈ ಹಿಂದೆ ಇದೇ ಸುಶೇನ್ ಗುಪ್ತಾ, ಅಗಸ್ಟಾ ವೆಸ್ಟ್‌ಲ್ಯಾಂಡ್ ವಿವಿಐಪಿ ಚಾಪರ್ ಖರೀದಿ ಪ್ರಕರಣದಲ್ಲೂ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ತನಿಖೆ ಎದುರಿಸುತ್ತಿದ್ದಾರೆ ಎನ್ನಲಾಗಿದೆ. ಸುಶೇನ್ ಗುಪ್ತಾ ಒಡೆತನದ ಭಾರತೀಯ ಕಂಪನಿ ಡೆಫ್ಸಿಸ್ ಸೊಲ್ಯೂಷನ್ಸ್‌, ಗ್ರಾಹಕರಿಗೆ ಉಡುಗೊರೆ ನೀಡಲು ಒಂದು ಮಿಲಿಯನ್ ಯುರೋ ಪಡೆದ ಕುರಿತು ದಾಖಲೆಗಳು (ಇನ್ ವಾಯ್ಸ್) ಎಎಫ್ಎ ಬಳಿ ಇದೆ ಎಂದೂ ಹೇಳಲಾಗುತ್ತಿದೆ.
ಡಸಾಲ್ಟ್ ಸಂಸ್ಥೆಯು, 59 ರಫೇಲ್‌ ಯುದ್ಧ ವಿಮಾನಗಳ ಖರೀದಿ ಪ್ರಕ್ರಿಯೆಯಲ್ಲಿ ತೊಡಗಿದ್ದ ಭಾರತೀಯ ಸಂಸ್ಥೆಗೆ ಕೊಡುಗೆ ನೀಡಿದ್ದಾಗಿ ಭ್ರಷ್ಟಾಚಾರ ವಿರೋಧಿ ಸಂಸ್ಥೆಗೆ ತಿಳಿಸಿದೆ. ಸ್ವತಃ ಜೆಟ್ ತಯಾರಿಕಾ ಸಂಸ್ಥೆಯಾಗಿ ಭಾರತೀಯ ಸಂಸ್ಥೆ ಜೊತೆಗೆ ಏಕೆ ಕೈಜೋಡಿಸಬೇಕು ಎಂದು ಫ್ರಾನ್ಸ್‌ನ ಅಧಿಕಾರಿಗಳು ಪ್ರಶ್ನಿಸಿದಾಗ ಡಸಾಲ್ಟ್‌ ಸಂಸ್ಥೆ ಸಮರ್ಪಕ ಉತ್ತರ ನೀಡಿಲ್ಲವೆಂಬ ಎಎಫ್‍ಎ ಹೇಳಿಕೆ ಆಧರಿಸಿ ಮೀಡಿಯಾ ಪಾರ್ಟ್ ವೆಬ್‍ಸೈಟ್ ವರದಿ ಮಾಡಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಕೊಚ್ಚಿ ಬಳಿ ₹ 1,200 ಕೋಟಿ ಮೌಲ್ಯದ 200 ಕೆಜಿ ಹೆರಾಯಿನ್ ವಶ, 6 ಇರಾನಿ ಪ್ರಜೆಗಳ ಬಂಧನ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement