ಸಂಸದ ಅನಂತಕುಮಾರ ಹೆಗಡೆಗೆ ಮತ್ತೊಂದು ಜೀವ ಬೆದರಿಕೆ ಕರೆ

ಶಿರಸಿ: ಕೇಂದ್ರದ ಮಾಜಿ ಸಚಿವ ಹಾಗೂ ಉತ್ತರ ಕನ್ನಡ ಸಂಸದ, ಬಿಜೆಪಿ ಫೈರ್‌ ಬ್ರ್ಯಾಂಡ್‌  ಅನಂತಕುಮಾರ ಹೆಗಡೆ ಅವರಿಗೆ ಜೀವ ಬೆದರಿಕೆ ಹಾಕಿದವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಇಲ್ಲಿನ ಹೊರ ಮಾರುಕಟ್ಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಶಿರಸಿಯ ಕೆಎಚ್‌ಬಿ ಕಾಲೊನಿಯಲ್ಲಿರುವ ಸಂಸದರ ನಿವಾಸದ ಸ್ಥಿರ ದೂರವಾಣಿಗೆ ೯೪೬೪೫೫೪೦೩೯೯ ಈ ಸಂಖ್ಯೆಯಿಂದ ಎಪ್ರಿಲ್‌ ೫ರಂದು ಬೆಳಗ್ಗೆ ೨:೦೦ ಗಂಟೆಗೆ ಅನಾಮಧೇಯ ವ್ಯಕ್ತಿಯಿಂದ ಜೀವ ಬೆದರಿಕೆ ಕರೆ ಬಂದಿದೆ. ಸಂಸದ ಅನಂತಕುಮಾರ ಹೆಗಡೆ ಕರೆ ಸ್ವೀಕರಿಸಿದ ನಂತರ, ಮಾತನಾಡುತ್ತಿರುವುದು ಸಂಸದರೇ ಎಂಬುದನ್ನು ದೃಢಪಡಿಸಿಕೊಂಡ ನಂತರ ಉರ್ದು ಮಿಶ್ರಿತ ಹಿಂದಿ ಭಾಷೆಯಲ್ಲಿ ಬೆದರಿಕೆ ಹಾಕಲಾಗಿದೆ. ಹಿಂದಿನ ಬಾರಿ ಫೋನ್‌ ಮಾಡಿದಾಗ ಪೊಲೀಸ್‌ಗೆ ದೂರು ನೀಡಿದ್ದೆ. ಅದು ಪತ್ರಿಕೆಗಳಲ್ಲಿ ಸುದ್ದಿಯಾಗಿತ್ತು. ಆದರೆ ಈ ಬಾರಿ ಏನು ಮಾಡುತ್ತಿಯಾ? ಈಗ ನಿನ್ನನ್ನು ಏನು ಮಾಡುತ್ತೇನೆ ನೋಡು ಎಂದು ಬೆದರಿಕೆ ಹಾಕಿ ಕರೆ ಕಡಿತ ಮಾಡಲಾಗಿದೆ.

ಸುಮಾರು ೨ ನಿಮಿಷಗಳ ಕಾಲ ಕರೆ ಮಾಡಿದ ವ್ಯಕ್ತಿ ಮಾತನಾಡಿದ್ದು, ಅದರಲ್ಲಿ ನಂತರದ ಮಾತುಗಳು ಸ್ಪಷ್ಟವಾಗಿ ಕೇಳಿಸುತ್ತಿರಲಿಲ್ಲ. ಸಂಸದರಿಗೆ ಇತ್ತೀಚಿನ ದಿನಗಳಲ್ಲಿ ಬೆದರಿಕೆ ಕರೆಗಳು ಬರುವುದು ಹೆಚ್ಚಾಗಿದ್ದು, ಬೆದರಿಕೆ ಕರೆಯನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ಕೈಗೊಂಡು ಕರೆ ಮಾಡಿದ ವ್ಯಕ್ತಿಯನ್ನು ಪತ್ತೆ ಮಾಡಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಸಂಸದರ ಆಪ್ತ ಕಾರ್ಯದರ್ಶಿ ಸುರೇಶ ಶೆಟ್ಟಿ ಪೊಲೀಸ್‌ ಠಾಣೆಗೆ ಸಲ್ಲಿಸಿದ ದೂರಿನಲ್ಲಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ 2024: ಕರ್ನಾಟಕದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

4.8 / 5. 5

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement