ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆ: 32 ಸಾವಿರ ಖಾಸಗಿ ವಾಹನ ರಸ್ತೆಗೆ 

posted in: ರಾಜ್ಯ | 0

ಉಡುಪಿ: ಸಾರಿಗೆ ನೌಕರರು ಬುಧವಾರ (ಏ.೭)ದಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ಹೀಗಾಗಿ ಮೇರೆಗೆ ವಿವಿಧ ಜಿಲ್ಲೆಗಳಲ್ಲಿ ಖಾಸಗಿ ವಾಹನಗಳನ್ನು ಓಡಿಸಲು ಸರ್ಕಾರ ತೀರ್ಮಾನಿಸಿದೆ.ಇದಕ್ಕಾಗಿ ಬೆಂಗಳೂರಿನ ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಖಾಸಸಗಿ ಬಸ್‌ಗಳ ಪ್ರವೇಶಕ್ಕೆ ಅನುಮತಿ ನೀಡಿ ಆದೇಶ ಹೊರಡಿಸಿದೆ.
ಈ ಮಧ್ಯೆ ಮಂಗಳವಾರ ಉಡುಪಿಯಲ್ಲಿ ಖಾಸಗಿ ಬಸ್ ಒಕ್ಕೂಟದ ರಾಜ್ಯ ಖಜಾಂಚಿ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಾರಿಗೆ ನೌಕರರ ಮುಷ್ಕರದಿಂದ ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಸರ್ಕಾರದ ನಿರ್ಧಾರದ ಹಿನ್ನಲೆಯಲ್ಲಿ 32,000 ಖಾಸಗಿ ವಾಹನಗಳನ್ನು ರಸ್ತೆಗೆ ಇಳಿಸುತ್ತೇವೆ” ಎಂದು ಹೇಳಿದರು.
ಬುಧವಾರದಿಂದ 8 ಸಾವಿರ ಖಾಸಗಿ ಬಸ್ಗಳು, 20 ಸಾವಿರ ಮ್ಯಾಕ್ಸಿ ಕ್ಯಾಬ್ ಓಡಾಟ ನಡೆಸಲಿದೆ. 4000 ಸ್ಟೇಜ್ ಕ್ಯಾರೇಜ್ ವಾಹನಗಳು ರಸ್ತೆಗೆ ಇಳಿಯಲಿವೆ ಎಂದರು.
ರಾಜ್ಯಾದ್ಯಂತ 60:40 ಅನುಪಾತ ಜಾರಿಗೆ ತನ್ನಿ, ಉತ್ತರ ಕರ್ನಾಟಕದಲ್ಲಿ ಸರಕಾರಿ ಬಸ್ ಏಕಸ್ವಾಮ್ಯತೆ ಇದೆ. ಖಾಸಗಿ ವಾಹನಗಳಿಗೆ ಪರವಾನಿಗೆ ಕೊಡಿ, ರಾಜ್ಯಾದ್ಯಂತ ಖಾಸಗೀಕರಣ ವ್ಯವಸ್ಥೆ ಜಾರಿಗೆ ತನ್ನಿ. ಇದರಿಂದ ಸರಕಾರಕ್ಕೆ ತೆರಿಗೆ ಸಂಗ್ರಹಕ್ಕೆ ಬಹಳ ಉಪಯೋಗವಾಗಲಿದೆ ಎಂದು ಹೇಳಿದರು.
ಮನವೊಲಿಕೆ ಯತ್ನ ಇಲ್ಲ “ಮುಷ್ಕರಕ್ಕೆ ಕರೆ ನೀಡಿರುವ ಸಾರಿಗೆ ನೌಕರರ ಮನವೊಲಿಕೆ ಯತ್ನ ಮಾಡುವುದಿಲ್ಲ. ಪರ್ಯಾಯ ಕ್ರಮಕ್ಕೆ ಸಿದ್ಧವಾಗಿದ್ದೇವೆ” ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಹೇಳಿದ್ದಾರೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ಅನೇಕ ಗ್ರಾಪಂಗಳಿಗೆ ಚುನಾವಣೆ ಘೋಷಣೆ: ಅಕ್ಟೋಬರ್‌ 28ರಂದು ಮತದಾನ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement