ಸಾರಿಗೆ ಮುಷ್ಕರ: ಬೆಂಗಳೂರಿನಲ್ಲಿ ಪ್ರತಿ ೫ ನಿಮಿಷಕ್ಕೊಂದು ಮೆಟ್ರೊ ರೈಲು..!

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರು ಬುಧವಾರದಿಂದ (ಮಾ.೭ರಿಂದ) ಅನಿರ್ದಿಷ್ಟವಾಧಿ ಮುಷ್ಕರ ಆರಂಭಿಸುವುದರಿಂದ ಪ್ರಯಾಣಿಕರಿಗೆ ಬಸ್‌ಗಳು ಸ್ಥಗಿತಗೊಳ್ಳುವ ಸಾಧ್ಯತೆಯಿದೆ. ಹೀಗಾಗಿ ಸರ್ಕಾರವು ಈ ಬಗ್ಗೆ ಕ್ರಮಕ್ಕೆ ಮುಂದಾಗಿದ್ದು ಬೆಂಗಳೂರಿನಲ್ಲಿ ಪ್ರತಿ ೫ನಿಮಿಷಕ್ಕೊಂದು ಮೆಟ್ರೋ ರೈಲಿನ ವ್ಯವಸ್ಥೆ ಮಾಡಲಾಗಿದೆ.
ಬಸ್‌ ಇಲ್ಲದೆ ಸಾರ್ವಜನಿಕರು ಪರದಾಡಬಾರದು ಎಂಬ ದೃಷ್ಟಿಯಿಂದ ಸರ್ಕಾರ ಈ ಕ್ರಮಕ್ಕರೆ ಮುಂದಾಗಿದ್ದು ಹೀಗಾಗಿ ಬೆಂಗಳೂರಿನಲ್ಲಿ ಪ್ರತಿ ೫ ನಿಮಿಷಕ್ಕೊಂದು ಮೆಟ್ರೋ ರೈಲಿನ ವ್ಯವಸ್ಥೆ ಮಾಡಲಾಗಿದೆ. ಮೆಟ್ರೋ ರೈಲು ಬೆಳಗ್ಗೆ ೭ಗಂಟೆಯಿಂದ ರಾತ್ರಿ ೯ಗಂಟೆಯ ವರೆಗೆ ಮೆಟ್ರೋ ಓಡಾಡಲಿದೆ ಎಂದು ತಿಳಿಸಲಾಗಿದೆ. ಇದಲ್ಲದೆ ದೂರದ ಪ್ರಯಾಣ ಮಾಡುವವರಿಗೆ ಹೆಚ್ಚವರಿ ರೈಲೆಗಳನ್ನು ಓಡಿಸುವಂತೆ ರೈಲ್ವೆ ಇಲಾಖೆಯನ್ನು ಕೇಳಿಕೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಪೋಕ್ಸೋ ಪ್ರಕರಣ : ಮುರುಘಾ ಶರಣರ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್

ನಿಮ್ಮ ಕಾಮೆಂಟ್ ಬರೆಯಿರಿ

advertisement