ಕೇಂದ್ರ ಸಚಿವ ಜೋಶಿ ಮನೆ ಎದುರು ಮಹಿಳೆ ಆತ್ಮಹತ್ಯೆಗೆ ಯತ್ನ..

posted in: ರಾಜ್ಯ | 0

ಹುಬ್ಬಳ್ಳಿ:ಬಿದ್ದ ಮನೆಯ ಪರಿಹಾರಕ್ಕಾಗಿ ಅಲೆದು ಅಲೆದು ಸುಸ್ತಾದ ಮಹಿಳೆಯೊಬ್ಬರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನೆ ಎದುರು ಡೆತ್ ನೋಟ್ ಬರೆದಿಟ್ಟು  ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.‌
ಧಾರವಾಡ ತಾಲೂಕಿನ ಗರಗ ಗ್ರಾಮದ ಶ್ರೀದೇವಿ ವೀರಪ್ಪ ಕಮ್ಮಾರ ಎಂಬ ಮಹಿಳೆಯೇ ಆತ್ಮಹತ್ಯೆಗೆ ಯತ್ನಿಸಿದವರು. ಕಳೆದ ಮಳೆಗಾಲದ ಸಮಯದಲ್ಲಿ ಅತಿವೃಷ್ಟಿಯಿಂದ ಮನೆ ಬಿದಿದ್ದು, ಅದರ ಪರಿಹಾರಕ್ಕಾಗಿ ಕಳೆದ ಐದು ತಿಂಗಳಿಂದ ಧಾರವಾಡ ಗ್ರಾಮೀಣ ಶಾಸಕ ಅಮೃತ ದೇಸಾಯಿ ಹತ್ತಿರ ಹೋಗಿ ಕೇಳಿದ್ದಾರೆ.  ಅವರು ಸಂಸದರ ಕಡೆ ಹೋಗಲು ಹೇಳಿದ್ದಾರೆ. ಕೇಂದ್ರ ಸಚಿವರ ಮನೆಗೂ ಹಲವು ಸಾರಿ ಮನೆ ಪರಿಹಾರ ಕೇಳಿದ್ದಾರೆ. ಅವರು ಕೂಡ ಸರಿಯಾಗಿ ಸ್ಪಂದಿಸಿಲ್ಲ ಎಂದು ಮನನೊಂದ ಶ್ರೀದೇವಿ ಅವರು ಮಂಗಳವಾರ ಕೇಂದ್ರ ಸಚಿವರ ಮನೆ ಎದುರು ಡೆತ್ ನೋಟ್ ಬರೆದು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ‌. ತೀವ್ರವಾಗಿ ಅಸ್ವಸ್ಥಗೊಂಡ ಇವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯನವರ ರಾಜಕೀಯ ಕಾರ್ಯದರ್ಶಿಗಳು, ಕಾನೂನು ಸಲಹೆಗಾರರ ನೇಮಕ

3.7 / 5. ಒಟ್ಟು ವೋಟುಗಳು 3

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement