ಈ ರಾಜ್ಯಗಳಲ್ಲಿ ಕೋವಿಡ್ -19 ಉಲ್ಬಣ ನಿಯಂತ್ರಣಕ್ಕೆ ರಾತ್ರಿ ಕರ್ಫ್ಯೂ

ನವ ದೆಹಲಿ: ಕೋವಿಡ್ -19 ಪ್ರಕರಣಗಳ ಉಲ್ಬಣ ನಿಯಂತ್ರಿಸಲು ಭಾರತದ ಬಹುಪಾಲು ಭಾಗವು ಈಗ ಲಾಕ್‌ಡೌನ್, ವಾರಾಂತ್ಯದ ಲಾಕ್‌ಡೌನ್, ರಾತ್ರಿ ಕರ್ಫ್ಯೂ, ಶಾಲೆಗಳು ಮತ್ತು ಕಾಲೇಜುಗಳನ್ನು ಮುಚ್ಚುವುದು ಸೇರಿದಂತೆ ವಿವಿಧ ನಿರ್ಬಂಧಗಳನ್ನು ಪುನಃ ವಿಧಿಸಿದೆ.
ಸೋಮವಾರ ದೇಶದಲ್ಲಿ 1 ಲಕ್ಷಕ್ಕೂ ಹೆಚ್ಚು ಹೊಸ ಕೋವಿಡ್ -19 ಪ್ರಕರಣಗಳೊಂದಿಗೆ ಕೊರೊನಾ ವೈರಸ್‌ ಸಾಂಕ್ರಾಮಿಕ ಆರಂಭವಾದಾಗಿನಿಂದ ಅತಿ ಹೆಚ್ಚು ಪ್ರಕರಣಗಳು ಒಂದೇ ದಿನದಲ್ಲಿ ದಾಖಲಾದ ನಂತರದಲ್ಲಿ ಈ ಬಗ್ಗೆ ಮತ್ತೆ ಚಿಂತನೆ ನಡೆಸುವಂತೆ ಮಾಡಿದೆ.
ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಹೆಚ್ಚು ಹಾನಿಗೊಳಗಾದ ರಾಜ್ಯವಾದ ಮಹಾರಾಷ್ಟ್ರದಲ್ಲಿ ಈ ಕ್ರಮಗಳು ಕಟ್ಟುನಿಟ್ಟಾಗಿವೆ. ರಾಜಸ್ಥಾನ, ಒಡಿಶಾ, ಮಹಾರಾಷ್ಟ್ರ ಮತ್ತು ಗುಜರಾತ್‌ನಲ್ಲಿ ರಾತ್ರಿ ಕರ್ಫ್ಯೂ ಸಾಮಾನ್ಯ ಕ್ರಮಗಳಲ್ಲಿ ಒಂದಾಗಿದೆ.
ಮಹಾರಾಷ್ಟ್ರದಲ್ಲಿ ರಾತ್ರಿ ಕರ್ಫ್ಯೂ: ಪ್ರತಿದಿನ ರಾತ್ರಿ 8 ರಿಂದ ಬೆಳಿಗ್ಗೆ 7 ರ ವರೆಗೆ ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ಜಾರಿಯಾಗಿದೆ. ಜೊತೆಗೆ ವಾರಾಂತ್ಯದಲ್ಲಿ, ಸಂಪೂರ್ಣ ಲಾಕ್‌ಡೌನ್ (ಶನಿವಾರ ರಾತ್ರಿ 8 ರಿಂದ ಸೋಮವಾರ ಬೆಳಿಗ್ಗೆ 7 ರವರೆಗೆ) ವಿಧಿಸಲಾಗುತ್ತದೆ. ನಿರ್ಬಂಧಗಳು ಏಪ್ರಿಲ್ 5 ರಿಂದ ಜಾರಿಗೆ ಬಂದವು. ಆದಾಗ್ಯೂ, ಅಗತ್ಯ, ವೈದ್ಯಕೀಯ ಸೇವೆಗಳು ಮತ್ತು ಸಾರಿಗೆ ಅನುಮತಿ ನೀಡಲಾಗಿದೆ. ದಿನವಿಡೀ ಐದು ಅಥವಾ ಹೆಚ್ಚಿನ ಜನರು ಸೇರುವುದನ್ನು ನಿಷೇಧವನ್ನೂ ಇದು ಒಳಗೊಂಡಿದೆ.
ಒಡಿಶಾದಲ್ಲಿ ರಾತ್ರಿ ಕರ್ಫ್ಯೂ: ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಒಡಿಶಾ ಸರ್ಕಾರ ರಾಜ್ಯದ 10 ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ವಿಧಿಸಿದೆ. ಸುಂದರ್‌ಗಡ, ಬಾರ್‌ಗಡ, ಜಾರ್ಸುಗುಡಾ, ಸಂಬಲ್‌ಪುರ, ಬಾಲಂಗೀರ್, ನುವಾಪಾಡಾ, ಕಲಹಂಡಿ, ಮಲ್ಕಂಗಿರಿ, ಕೊರಪುತ್ ಮತ್ತು ನಬರಂಗ್‌ಪುರ ಜಿಲ್ಲೆಗಳಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5 ರ ವರೆಗೆ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ.
ರಾಜಸ್ಥಾನದಲ್ಲಿ ರಾತ್ರಿ ಕರ್ಫ್ಯೂ: ಮಾರ್ಗಸೂಚಿಗಳ ಪ್ರಕಾರ, ರಾತ್ರಿ ಕರ್ಫ್ಯೂ ರಾತ್ರಿ 8 ರಿಂದ ಬೆಳಿಗ್ಗೆ 6 ರ ವರೆಗೆ ಜಾರಿಯಲ್ಲಿರುತ್ತದೆ. ಕರ್ಫ್ಯೂ ಸಮಯದಲ್ಲಿ ರೆಸ್ಟೋರೆಂಟ್‌ಗಳು ಮತ್ತು ಹೋಟೆಲ್‌ಗಳಲ್ಲಿ ಊಟ-ಉಪಾಹಾರ ಮಾಡುವುದನ್ನು ನಿಷೇಧಿಸಲಾಗಿದೆ. ಆದರೆ ಮನೆಗೇ ಆಹಾರ ವಿತರಿಸಲು ಅವಕಾಶವಿದೆ.
ಗುಜರಾತ್‌ನಲ್ಲಿ ರಾತ್ರಿ ಕರ್ಫ್ಯೂ: ಗುಜರಾತಿನ ನಾಲ್ಕು ಪ್ರಮುಖ ನಗರಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಯಲ್ಲಿದ್ದು, ಏಪ್ರಿಲ್ 15 ರ ವರೆಗೆ ವಿಸ್ತರಿಸಲು ಗುಜರಾತ್ ಸರ್ಕಾರ ನಿರ್ಧರಿಸಿದೆ. ಅಹಮದಾಬಾದ್, ಸೂರತ್, ವಡೋದರಾ ಮತ್ತು ರಾಜ್‌ಕೋಟ್‌ನಲ್ಲಿ ರಾತ್ರಿ ೧೦ರಿಂದ ಬೆಳಿಗ್ಗೆ 6 ರ ವರೆಗೆ ಏಪ್ರಿಲ್ 15 ರವರೆಗೆ ರಾತ್ರಿ ಕರ್ಫ್ಯೂ ಮುಂದುವರಿಯಲಿದೆ ಎಂದು ಗುಜರಾತ್ ಸರ್ಕಾರದ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತಿಳಿಸಿದ್ದಾರೆ.
ದೆಹಲಿಯಲ್ಲಿ ರಾತ್ರಿ ಕರ್ಫ್ಯೂಗೆ ಚಿಂತನೆ:ಹೆಚ್ಚುತ್ತಿರುವ ಕೊರೊನಾ ವೈರಸ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ದೆಹಲಿ ಸರ್ಕಾರವು ರಾಷ್ಟ್ರ ರಾಜಧಾನಿಯಲ್ಲಿ ರಾತ್ರಿ ಕರ್ಫ್ಯೂ ವಿಧಿಸುವ ಪ್ರಸ್ತಾಪ ಪರಿಗಣಿಸುತ್ತಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. “ರಾತ್ರಿ ಕರ್ಫ್ಯೂ ವಿಧಿಸುವ ಪ್ರಸ್ತಾಪವನ್ನು ಪರಿಗಣಿಸಲಾಗುತ್ತಿದೆ. ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಕರ್ಫ್ಯೂ ವಿಧಿಸುವ ಸಮಯ ಸೇರಿದಂತೆ ವಿವರಗಳನ್ನು ಚರ್ಚಿಸಲಾಗುತ್ತಿದೆ” ಎಂದು ಸರ್ಕಾರಿ ಅಧಿಕಾರಿಗಳು ಹೇಳಿದ್ದಾರೆ.
ಪಂಜಾಬಿನಲ್ಲಿ ರಾತ್ರಿ ಕರ್ಫ್ಯೂ:ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆ, ವೈರಸ್ ಹರಡುವುದನ್ನು ತಡೆಯಲು ಪಂಜಾಬ್ ಸರ್ಕಾರವು ಅಸ್ತಿತ್ವದಲ್ಲಿರುವ ಕೋವಿಡ್ -19 ಸಂಬಂಧಿತ ನಿರ್ಬಂಧಗಳನ್ನು ಏಪ್ರಿಲ್ 10ರ ವರೆಗೆ ವಿಸ್ತರಿಸಲು ಆದೇಶಿಸಿತ್ತು. ಹಿಂದಿನ ಆದೇಶದಲ್ಲಿ, ಕೋವಿಡ್ -19 ಹರಡುವಿಕೆ ತಡೆಯಲು ಪಂಜಾಬ್ ಸರ್ಕಾರ ಹೊಸ ಕ್ರಮಗಳನ್ನು ಘೋಷಿಸಿದೆ. ಪರಿಷ್ಕೃತ ಮಾರ್ಗಸೂಚಿಗಳ ಪ್ರಕಾರ, ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಲುಧಿಯಾನ, ಪಟಿಯಾಲ ಸೇರಿದಂತೆ ಇಂತಹ ಜಿಲ್ಲೆಗಳನ್ನು ರಾತ್ರಿ ಕರ್ಫ್ಯೂ 9 ರಿಂದ 11 ಕ್ಕೆ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ. ರಾತ್ರಿ 9 ರಿಂದ ಬೆಳಿಗ್ಗೆ 5 ರವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ.

ಪ್ರಮುಖ ಸುದ್ದಿ :-   ಟಿ20 ವಿಶ್ವಕಪ್ ಕ್ರಿಕೆಟ್‌ 2024 : 15 ಆಟಗಾರರ ಭಾರತದ ತಂಡ ಪ್ರಕಟ ; ಕೆಎಲ್ ರಾಹುಲ್ ಗೆ ಕೊಕ್

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement