ಕರ್ನಾಟಕದಲ್ಲಿ ಬುಧವಾರ 7 ಸಾವಿರದ ಸಮೀಪ ಬಂದ ದೈನಂದಿನ ಕೊರೊನಾ ಸೋಂಕು..!

ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆಯಲ್ಲಿ ಸೋಂಕು ದಿನದಿಂದ ದಿನ್ಕೆ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 6,976 ಜನರಿಗೆ ಹೊಸ ಕೊರೊನಾ ಸೋಂಕು ದೃಢಪಟ್ಟ ವರದಿಯಾಗಿದೆ. ಇದೇವೇಳೆ ಸೋಂಕಿನಿಂದ 35 ಮಂದಿ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಈಗ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 10,33,560ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ 12,731ಕ್ಕೆ ತಲುಪಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಬುಧವಾರ ಕೊರೋನಾ ಸೋಂಕಿತರ ಸಂಖ್ಯೆ 5 ಸಾವಿರದ ಗಡಿಯಲ್ಲಿದ್ದು, 4,991 ಜನರಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 4,60,016ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಸೋಂಕಿಗೆ 25 ಜನರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಬುಧವಾರ 2,794 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,71,556ಕ್ಕೆ ಏರಿಕೆಯಾಗಿದೆ. 49,254ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 353 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement