ಭಾರತದಲ್ಲಿ ಒಂದೇ ದಿನ 1.15 ಲಕ್ಷಕ್ಕೂ ಹೆಚ್ಚು ಪ್ರಕರಣ ದಾಖಲು..! ವೇಗದಲ್ಲಿ ಹರಡುತ್ತಿರುವ ಕೊರೊನಾ ಎರಡನೇ ಅಲೆ..!!

ನವ ದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಶರವೇಗದಲ್ಲಿ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 1,15,736 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಕೊರೊನಾ ಪ್ರಕರಣ ದೇಶದಲ್ಲಿ ಕಂಡುಬಂದ ದಿನದಿಂದ ಈವರೆಗಿನ ಅತಿ ಹೆಚ್ಚು ಏಕದಿನದ ಸೋಂಕು ಇದಾಗಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,28,01,785ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 630 ಜನರು ಕೊರೊನಾ ಸೋಂಕಿಗೆ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಮೃತಪಟ್ಟವರ ಸಂಖ್ಯೆ 1,66,177ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 8,43,473 ಕೋವಿಡ್ ಏರಿಕೆಯಾಗಿದ್ದು, 1,17,92,135 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 59,856 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ದೇಶದಲ್ಲಿ ಮಂಗಳವಾರ 12,08,329 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ಈವರೆಗೆ ಒಟ್ಟು 25,14,39,598 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ದೇಶದಲ್ಲಿ ಈವರೆಗೆ 8,70,77,474 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ ಎಂದು ಮಾಹಿತಿ ನೀಡಿದೆ.

ಪ್ರಮುಖ ಸುದ್ದಿ :-   ಇವಿಎಂ ಮತಗಳ ಜೊತೆ ವಿವಿಪ್ಯಾಟ್ ಮತಗಳ ಸಂಪೂರ್ಣ ಎಣಿಕೆ : ಎಲ್ಲ ಅರ್ಜಿಗಳನ್ನು ವಜಾ ಮಾಡಿದ ಸುಪ್ರೀಂ ಕೋರ್ಟ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement