ಮಹತ್ವದ ಸುದ್ದಿ…ಕರ್ನಾಟಕದಲ್ಲಿ ಏಪ್ರಿಲ್‌ ಈ ದಿನದಿಂದ ಕೆಲಸ ಸ್ಥಳದಲ್ಲಿಯೇ ಲಸಿಕೆ..! 

posted in: ರಾಜ್ಯ | 0

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹವಾಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಅಭಿಯಾನವನ್ನ ಮತ್ತಷ್ಟು ಚುರುಕುಗೊಳಿಸಲು ಸರ್ಕಾರ ನಿರ್ಧರಿಸಿದೆ.
ಮಹತ್ವದ ನಿರ್ಧಾರದಲ್ಲಿ ಕೇಂದ್ರ ಸರ್ಕಾರವು ಕೆಲಸದ ಸ್ಥಳದಲ್ಲಿಯೇ ಲಸಿಕೆ ನೀಡಬಹುದು ಎಂದು ರಾಜ್ಯಗಳಿಗೆ ಅನುಮತಿ ನೀಡಿದ ನಂತರ ಕರ್ನಾಟಕ ಸರ್ಕಾರವು ಏಪ್ರಿಲ್ 11 ರಿಂದ ಕಚೇರಿಗಳಲ್ಲಿ ಮತ್ತು ಇತರೆ ಉದ್ಯೋಗ ಸ್ಥಳಗಳಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಮುಂದಾಗಿದೆ. ಈ ಕುರಿತು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಾ. ಕೆ. ಸುಧಾಕರ್ ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಈ ಕುರಿತು ಟ್ವೀಟ್‌ ಮಾಡಿದ ಸಚಿವರು, ‘ಏಪ್ರಿಲ್ 11 ರಿಂದ ಕಚೇರಿಗಳಲ್ಲಿ ಮತ್ತು ಇತರೆ ಉದ್ಯೋಗ ಸ್ಥಳಗಳಲ್ಲಿ ಕೊರೊನಾ ಲಸಿಕೆ ವಿತರಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. 45 ವರ್ಷಕ್ಕಿಂತ ಮೇಲ್ಪಟ್ಟ ಕನಿಷ್ಟ 100 ಜನ ನೌಕರರುಳ್ಳ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಲಸಿಕೆ ನೀಡಲು ಅವಕಾಶವಿದ್ದು ಇದರಿಂದ ಲಸಿಕೆ ವಿತರಣೆ ಅಭಿಯಾನಕ್ಕೆ ಮತ್ತಷ್ಟು ವೇಗ ಸಿಗಲಿದೆ’ ಎಂದು ಹೇಳಿದ್ದಾರೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ಭಾರತದ ಎಲ್ಲ ರಾಜ್ಯಗಳು, ಅನೇಕ ದೇಶಗಳನ್ನು ಹೆಸರನ್ನು ಭೂಪಟ-ಧ್ವಜ ನೋಡಿಯೇ ಹೇಳುವ 18 ತಿಂಗಳ ಪುಟ್ಟಪೋರ ಅನಿಕೇತ ಭಟ್‌...!

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement