ಸಾರಿಗೆ ಮುಷ್ಕರ: ಕರ್ನಾಟಕ ವಿವಿ ಕೆಲ ಪರೀಕ್ಷೆಗಳು ಮುಂದೂಡಿಕೆ

posted in: ರಾಜ್ಯ | 0

ಧಾರವಾಡ : ರಾಜ್ಯ ರಸ್ತೆ ಸಾರಿಗೆ ನೌಕರರ ಅನಿರ್ಧಿಷ್ಟಾವಧಿಯ ಮುಷ್ಕರದ ಹಿನ್ನಲೆಯಲ್ಲಿ, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕರ್ನಾಟಕ ವಿಶ್ವ ವಿದ್ಯಾಲಯ  ಏಪ್ರಿಲ್‌ 8 ಹಾಗೂ 9ರಂದು ನಡೆಯಲಿರುವ ಪರೀಕ್ಷೆಯನ್ನು ಮುಂದೂಡಿ ಆದೇಶ ಹೊರಡಿಸಿದೆ.
ದಿನಾಂಕ 08-04-2021 ಮತ್ತು 09-04-2021ರಂದು ನಡೆಯಲಿರುವ ಎಲ್ಲ ಸ್ನಾತಕ ಕೋರ್ಸುಗಳ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕರ್ನಾಟಕ ವಿಶ್ವವಿದ್ಯಾಲಯ ಪ್ರಕಟನೆಯಲ್ಲಿ ತಿಳಿಸಿದೆ.
ಈ ಕುರಿತಂತೆ ಕರ್ನಾಟಕ ವಿವಿ ಕುಲಸಚಿವರು(ಮೌಲ್ಯಮಾಪನ) ಪ್ರೊ.ರವೀಂದ್ರನಾಥ್ ಕದಂ ಸುತ್ತೋಲೆ ಹೊರಡಿಸಿ ಈ ಮೂಲಕ ಎಲ್ಲಾ ಮಹಾವಿದ್ಯಾಲಯಗಳ ಪ್ರಾಚಾರ್ಯರಿಗೆ, ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರಿಗೆ ತಿಳಿಸಿದ್ದು, ರಾಜ್ಯದ ಸಾರಿಗೆ ನೌಕರರು ಮುಷ್ಕರ ಹಮ್ಮಿಕೊಂಡಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಹೋಗಿ ಪರೀಕ್ಷೆ ಬರೆಯಲು ತೊಂದರೆ ಆಗಲಿದೆ.
ಹೀಗಾಗಿ ದಿನಾಂಕ 08-04-2021 ಮತ್ತು ದಿನಾಂಕ 09-04-2021ರಂದು ನಡೆಯಲಿರುವ ಎಲ್ಲ ಸ್ನಾತಕ ಕೋರ್ಸುಗಳ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಪರೀಕ್ಷೆಗಳನ್ನು ಮುಂದೆ ನಡೆಸುವ ದಿನಾಂಕಗಳನ್ನು ನಂತರ ತಿಳಿಸಲಾಗುವುದು. ದಿನಾಂಕ 12-04-2021ರಿಂದ ಈ ಮೊದಲಿನ ವೇಳಾಪಟ್ಟಿಯಲ್ಲಿ ತಿಳಿಸಿದ ಷರತ್ತುಗಳನ್ವಯ ಎಲ್ಲಾ ಪರೀಕ್ಷೆಗಳು ನಡೆಯಲಿವೆ ಎಂದು ಅವರು ತಿಳಿಸಿದ್ದಾರೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ಭಾರತದ ಎಲ್ಲ ರಾಜ್ಯಗಳು, ಅನೇಕ ದೇಶಗಳನ್ನು ಹೆಸರನ್ನು ಭೂಪಟ-ಧ್ವಜ ನೋಡಿಯೇ ಹೇಳುವ 18 ತಿಂಗಳ ಪುಟ್ಟಪೋರ ಅನಿಕೇತ ಭಟ್‌...!

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement