ಶಿಕ್ಷಕರ ವರ್ಗಾವಣೆ: ಕೆಎಟಿ ಆದೇಶ ಎತ್ತಿ ಹಿಡಿದ ಹೈಕೋರ್ಟ್‌

ಬೆಂಗಳೂರು: ಶಿಕ್ಷಕರ ವರ್ಗಾವಣೆ ಕುರಿತಂತೆ ಕೆಎಟಿ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.
2020 -21 ನೇ ಸಾಲಿನಲ್ಲಿ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಸಂದರ್ಭದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಹೆಚ್ಚುವರಿ ಶಿಕ್ಷಕರಿಗೆ ಆದ್ಯತೆ ನೀಡಬೇಕೆಂದು ಶಿಕ್ಷಣ ಇಲಾಖೆಯ ಆದೇಶ ರದ್ದುಗೊಳಿಸಿ ಕರ್ನಾಟಕ ಆಡಳಿತ ನ್ಯಾಯ ಮಂಡಳಿ(KAT) ತೀರ್ಪು ನೀಡಿತ್ತು. ಈ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.
ಹೈಕೋರ್ಟ್ ಹಿರಿಯ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರಿದ್ದ ಪೀಠ, ಕರ್ನಾಟಕ ಆಡಳಿತ ನ್ಯಾಯ ಮಂಡಳಿ ಆದೇಶ ಪ್ರಶ್ನಿಸಿ ಶಿಕ್ಷಣ ಇಲಾಖೆ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದೆ.
ಎಲ್ಲಾ ಶಿಕ್ಷಕರನ್ನು ಸಮಾನವಾಗಿ ಕಾಣಬೇಕು, ತಾರತಮ್ಯ ಮಾಡಬಾರದು ಎಂದು ಹೇಳಲಾಗಿದ್ದು, 2019 – 20 ನೇ ಸಾಲಿನ ಹೆಚ್ಚುವರಿ ಶಿಕ್ಷಕರಿಗೆ ಆದ್ಯತೆ ನೀಡಬೇಕೆಂಬ ಸರ್ಕಾರದ ಆದೇಶ ನ್ಯಾಯಸಮ್ಮತವಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement