ಕರ್ತವ್ಯಕ್ಕೆ ಹಾಜರಾಗುವ ಸಾರಿಗೆ ಸಿಬ್ಬಂದಿಗೆ ರಕ್ಷಣೆ: ಸಚಿವ ಬೊಮ್ಮಾಯಿ

ಹುಮ್ನಾಬಾದ: ಸ್ವಯಂ ಪ್ರೇರಣೆಯಿಂದ ಕರ್ತವ್ಯಕ್ಕೆ ಹಾಜರಾಗುವ ಸಾರಿಗೆ ಸಿಬ್ಬಂದಿಗೆ ಸೂಕ್ತ ರಕ್ಷಣೆ ನೀಡುವುದಾಗಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ್ ಬೊಮ್ಮಾಯಿ ತಿಳಿಸಿದರು
ಕೋಟ್

ಮುಷ್ಕರನಿರತ ಸಾರಿಗೆ ನೌಕರರಿಗೆ ಮಾನವೀಯತೆಯಿಂದ ಕಳಕಳಿಯ ಮನವಿ ಮಾಡುತ್ತೇನೆ.  ಕೆಲಸಕ್ಕೆ ಹಾಜರಾಗಿ. ಜನಸಾಮಾನ್ಯರಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ. 
-ಬಸವರಾಜ್ ಬೊಮ್ಮಾಯಿ, ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ

ಸಚಿವರುಹುಮ್ನಾಬಾದ್ ನಲ್ಲಿ ಗುರುವಾರ ಸುದ್ದಿಗಾರರರಿಗೆ ಈ ವಿಷಯ ತಿಳಿಸಿದ ಅವರು, ಸ್ವಯಂಪ್ರೇರಣೆಯಿಂದ ಕರ್ತವ್ಯಕ್ಕೆ ಹಾಜರಾಗುವ ಸಾರಿಗೆ ಸಿಬ್ಬಂದಿಗೆ ಸೂಕ್ತ ಭದ್ರತೆ ಒದಗಿಸಲಾಗುವುದು.‌ ಅದು ನಮ್ಮ‌ ಕೆಲಸ. ಅದನ್ನು ನಾವು ಮಾಡುತ್ತೇವೆ. ಈ ಸಂಬಂಧ ರಾಜ್ಯದಲ್ಲಿರುವ ನಾಲ್ಕು ಸಾರಿಗೆ ನಿಗಮಗಳ ವ್ಯಾಪ್ತಿಯ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಜನಸಾಮಾನ್ಯರಿಗೆ ಆಗುತ್ತಿರುವ ತೊಂದರೆ ಕಣ್ಣಿಗೆ ಕಾಣುತ್ತಿದೆ. ಜನ ಎಷ್ಟು ಪರಿತಪಿಸುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಮುಷ್ಕರದಿಂದ ಸಾರಿಗೆ ಸಂಸ್ಥೆಗೆ ನಷ್ಟವಾಗುತ್ತಿದೆ.ಸಾರಿಗೆ ಸಂಸ್ಥೆಯು ಉಳಿಯಬೇಕು. ನೌಕರರಿಗೂ ಒಳ್ಳೆಯ ಸಂಬಳ ಸಿಗಬೇಕು.  ಅದು ದುಡಿಮೆಯಿಂದ ಮಾತ್ರ ಸಾಧ್ಯ. ದುಡಿಮೆ ಇಲ್ಲದೆ ಅದು ಅಸಾಧ್ಯ ಎಂದು ಬಸವರಾಜ ಬೊಮ್ಮಾಯಿ ಹೇಳಿದರು

ಪ್ರಮುಖ ಸುದ್ದಿ :-   ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement