ಭಾರತದಲ್ಲಿ ಏಪ್ರಿಲ್ 11ರಿಂದ 14ರ ವರೆಗೆ ವ್ಯಾಕ್ಸಿನ್ ಉತ್ಸವ: ಪ್ರಧಾನಿ ಮೋದಿ ಕರೆ

ನವದೆಹಲಿ:ದೇಶದಲ್ಲಿ ಏಪ್ರಿಲ್ 11ರಿಂದ 14ರ ವರೆಗೆ ವ್ಯಾಕ್ಸಿನ್ ಉತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ವ್ಯಾಕ್ಸಿನ್ ಮೂಲಕ ಹೆಚ್ಚಿನ ಜನರಿಗೆ ಲಸಿಕೆ ಹಾಕಿಸಬೇಕು, 45ವರ್ಷಕ್ಕೂ ಮೇಲ್ಪಟ್ಟವರಿಗೆ ತ್ವರಿತಗತಿಯಲ್ಲಿ ವ್ಯವಸ್ಥೆ ಮಾಡಬೇಕಾಗಿದೆ ಎಂದು ಹೇಳಿದ್ದಾರೆ.
ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಗುರುವಾರ ವಿಡಿಯೋ ಸಂವಾದದ ಸಭೆ ಬಳಿಕ ಮಾತನಾಡಿದ ಅವರು, ಕೋವಿಡ್-19 ಪರೀಕ್ಷೆಯನ್ನು ಹೆಚ್ಚಿಸಬೇಕಾಗಿದೆ. ಶೇ.70 ರಷ್ಟು ಆರ್ ಟಿ- ಪಿಸಿಆರ್ ಪರೀಕ್ಷೆ ಮಾಡಬೇಕಾಗಿದೆ. ಪರೀಕ್ಷೆಯನ್ನು ಹೆಚ್ಚಿನ ಸಂಖ್ಯೆಯಲ್ಲಿ ಮಾಡಿದಾಗ ಪಾಸಿಟಿವ್ ಕೇಸ್ ಗಳು ಅಧಿಕ ಸಂಖ್ಯೆಯಲ್ಲಿ ಬರುತ್ತವೆ. ಸೂಕ್ತ ಮಾದರಿಗಳ ಸಂಗ್ರಹ ಅತ್ಯಂತ ಪ್ರಮುಖವಾಗಿದೆ ಎಂದರು.
ಸೋಂಕು ಪತ್ತೆ, ಪರೀಕ್ಷೆ ಹಾಗೂ ಉಪಚಾರ ಅನಿವಾರ್ಯವಾಗಿದೆ.ದೇಶದಲ್ಲಿ ಮೊದಲನೇ ಅಲೆ ಮುಗಿದಿದ್ದು, ಪಾಸಿಟಿವ್ ದರ ಹೆಚ್ಚಳವಾಗುತ್ತಿದೆ. ಪಾಸಿಟಿವ್ ದರವನ್ನು ಶೇಕಡಾ 5ಕ್ಕಿಂತ ಕಡಿಮೆ ಮಾಡಬೇಕಾಗಿದೆ. ಲಸಿಕೆ ಅಭಿಯಾನ ಚುರುಕುಗೊಳಿಸಬೇಕಾಗಿದೆ.ಈ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕಾಗಿದೆ. ಇದಕ್ಕಾಗಿ ಸರ್ವ ಪಕ್ಷ ಸಭೆ ನಡೆಸಿ ಸರ್ಕಾರ ಒಮ್ಮತದ ಅಭಿಪ್ರಾಯಗಳನ್ನು ಸಂಗ್ರಹಿಸಬೇಕಾಗಿದೆ ಎಂದು ಸಲಹೆ ನೀಡಿದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ