ಮಹಾರಾಷ್ಟ್ರದಲ್ಲಿ ಗುರುವಾರ 56 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣ

ಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 56,286 ಹೊಸ ಪ್ರಕರಣ ದಾಖಲಾಗಿದೆ.ಕೊರೊನಾ ಸೋಂಕಿಗೆ 376 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಒಟ್ಟು ಕೋವಿಡ್ -19 ಪ್ರಕರಣಗಳ ಸಂಖ್ಯೆ ಈಗ 32,29,547 ಆಗಿದೆ. ಸಾವಿನ ಸಂಖ್ಯೆ 57,028 ಕ್ಕೆ ತಲುಪಿದೆ. ಗುರುವಾರ ರಾಜ್ಯಾದ್ಯಂತ 36,130 ರೋಗಿಗಳನ್ನು ಬಿಡುಗಡೆ ಮಾಡಲಾಗಿದ್ದು, ರಾಜ್ಯದಲ್ಲಿ ಒಟ್ಟು 26,49,757 ಮಂದಿ ಚೇತರಿಸಿಕೊಂಡಿದ್ದಾರೆ. ಮಹಾರಾಷ್ಟ್ರದಲ್ಲಿ ಈಗ ಚೇತರಿಕೆ ಪ್ರಮಾಣವು ಶೇಕಡಾ 82.05 ಆಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ