ಸರ್ಕಾರದ ಮಹತ್ವದ ಆದೇಶ: ಬೆಂಗಳೂರು ಸೇರಿದಂತೆ ರಾಜ್ಯದ 9 ಜಿಲ್ಲೆಗಳಲ್ಲಿ ‘ನೈಟ್ ಕರ್ಪ್ಯೂ’ ಜಾರಿ

ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ಹೆಚ್ಚಳವಿರುವ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ಒಂಭತ್ತು ಜಿಲ್ಲೆಗಳಲ್ಲಿ ಏಪ್ರಿಲ್‌10ರಿಂದ 10 ದಿನ ‘ನೈಟ್ ಕರ್ಪ್ಯೂ’ ಜಾರಿಗೊಳಿಸಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಹತ್ವದ ಆದೇಶ ಹೊರಡಿಸಿದ್ದಾರೆ.
ಕೊರೊನಾ ಸೋಂಕು ಆರ್ಭಟಿಸುತ್ತಿರುವ ಎಂಟು ಜಿಲ್ಲೆಗಳಲ್ಲಿ ರಾತ್ರಿ 10 ಗಂಟೆಯಿಂದ ಮುಂಜಾನೆ 5 ಗಂಟೆ ವರೆಗೆ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಬೆಂಗಳೂರು ನಗರ, ಉಡುಪಿ, ಮೈಸೂರು, ಕಲಬುರಗಿ, ತುಮಕೂರು, ,ಬೀದರ್ , ತುಮಕೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಏಪ್ರಿಲ್‌10ರಿಂದ ನೈಟ್ ಕರ್ಪ್ಯೂ ಜಾರಿಗೊಳಿಸಿ ಸಿಎಂ ಆದೇಶ ಹೊರಡಿಸಿದ್ದಾರೆ. ಇದು ಜಿಲ್ಲಾ ಕೇಂದ್ರಗಳಲ್ಲಿ ಮಾತ್ರ ಅನ್ವಯಿಸಲಿದೆ ಎಂದು ತಿಳಿಸಲಾಗಿದೆ. ಜೊತೆಗೆ ಈ ಸಂದರ್ಭದಲ್ಲಿ ಅಗತ್ಯಸೇವೆಗಳು ಹಾಗೂ ಸಾರಿಗೆ ಎಲ್ಲವೂ ಅಬಾಧಿತವಾಗಿದೆ ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ. ಹತ್ತು ದಿನಗಳಲ್ಲಿ ಈ ಪ್ರಯೋಗದ ಫಲಿತಾಂಶದ ಆಧಾರದ ಮೇಲೆ ಮುಂದಿನದನ್ನು ನಿರ‍್ಧರಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ದೇಶದಲ್ಲಿರುವ ಕರೋನ ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಮುಖ್ಯಮಂತ್ರಿಗಳೊಂದಿಗೆ ಗುರುವಾರ ಸಭೆ ನಡೆಸಿದರು. ಸಭೆ ಬಳಿಕ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ.
ಈ ಸಂದರ್ಭದಲ್ಲಿ ರಾಜ್ಯಗಳ ರಾತ್ರಿ ನಿರ್ಬಂಧಕ್ಕೆ (ಕೊರೊನಾ ಕರ್ಫ್ಯೂ) ಪ್ರಧಾನಿ ಮೋದಿ ಬೆಂಬಲ ನೀಡಿದ್ದು, ರಾತ್ರಿ 9 ಗಂಟೆಗೆ ‘ಕೊರೊನಾ ಕರ್ಫ್ಯೂ’ ಪ್ರಾರಂಭವಾಗಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದರು. ರಾತ್ರಿ 9 ರಿಂದ ಇಲ್ಲವೇ ರಾತ್ರಿ 10 ಗಂಟೆಯಿಂದ ಕರ್ಫ್ಯೂ ವಿಧಿಸಿ ಎಂದು ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳಿಗೆ ಪ್ರಧಾನಿ ಮೋದಿ ಸೂಚನೆ ನೀಡಿದ್ದರು. ಈ ಬೆನ್ನಲ್ಲೇ ಕರ್ನಾಟಕದಲ್ಲಿ ‘ನೈಟ್ ಕರ್ಪ್ಯೂ’ ಜಾರಿಗೊಳಿಸಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಹತ್ವದ ಆದೇಶ ಹೊರಡಿಸಿದ್ದಾರೆ. ರಾಜ್ಯದ ರಾತ್ರಿ ಕರ್ಪ್ಯೂ ಕಟ್ಟು ನಿಟ್ಟಾಗಿ ಪಾಲಿಸಬೇಕು. ಮನೆಯಿಂದ ಹೊರಗಡೆ ಬರಬಾರದು ಎಂದು ಯಡಿಯೂರಪ್ಪ ಕಟ್ಟು ನಿಟ್ಟಾಗಿ ಸೂಚನೆ ನೀಡಿದ್ದಾರೆ.ಅಲ್ಲದೆ ಮಾಸ್ಕ್‌ ಧರಿಸದಿದ್ದವರಿಗೆ ಕಡ್ಡಾಯವಾಗಿ ದಂಡ ವಿಧಿಸಿ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ಚಲಿಸುವ ರೈಲಿನಲ್ಲಿ ಹೃದಯಾಘಾತಕ್ಕೊಳಗಾದ ವ್ಯಕ್ತಿ: ಯಮರಾಜನಿಗೆ ಸಡ್ಡು ಹೊಡೆದು ಬಾಯಿಯಿಂದ ಉಸಿರು (ಸಿಪಿಆರ್) ನೀಡಿ ಬದುಕಿಸಿದ ಪತ್ನಿ | ವೀಡಿಯೊ ವೈರಲ್‌

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

advertisement