ಅನಿಲ್ ದೇಶ್ಮುಖ್ ವಿರುದ್ಧದ ಗಂಭೀರ ಆರೋಪಗಳಿಗೆ ಸಿಬಿಐ ತನಿಖೆ ಅಗತ್ಯ: ಸುಪ್ರೀಂ ಕೋರ್ಟ್‌

ನವ ದೆಹಲಿ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಮಾಡಿದ ಭ್ರಷ್ಟಾಚಾರ ಮತ್ತು ದುಷ್ಕೃತ್ಯದ ಆರೋಪಗಳು ‘ಗಂಭೀರ’ ಸ್ವರೂಪದ್ದಾಗಿದ್ದು ಸ್ವತಂತ್ರ ತನಿಖೆ ಅಗತ್ಯ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.
ಆರೋಪಗಳು ಗಂಭೀರವಾಗಿವೆ, ಗೃಹ ಸಚಿವರು ಮತ್ತು ಪೊಲೀಸ್ ಆಯುಕ್ತರುಬೇರೆಯಾಗುವವರೆಗೂ ಅವರು ಒಟ್ಟಿಗೆ ಕೆಲಸ ಮಾಡುತ್ತಿದ್ದರು, ಇಬ್ಬರೂ ನಿರ್ದಿಷ್ಟ ಸ್ಥಾನವನ್ನು ಹೊಂದಿದ್ದಾರೆ. ಸಿಬಿಐ ತನಿಖೆ ನಡೆಸಬೇಕಲ್ಲವೇ? ಆರೋಪಗಳ ಸ್ವರೂಪ ಮತ್ತು ಭಾಗಿಯಾಗಿರುವ ವ್ಯಕ್ತಿಗಳಿಗೆ ಸ್ವತಂತ್ರ ತನಿಖೆ ಅಗತ್ಯ” ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಎಸ್.ಕೆ.ಕೌಲ್ ಹೇಳಿದರು.
ಆಮಾಜಿ ಗೃಹ ಸಚಿವ ಅನಿಲ್‌ ದೇಶ್ಮುಖ್‌ ವಿರುದ್ಧದ ಭ್ರಷ್ಟಾಚಾರ ಮತ್ತು ದುಷ್ಕೃತ್ಯದ ಆರೋಪಗಳ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಬಾಂಬೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ  ಅನಿಲ್ ದೇಶ್ಮುಖ್ ಸುಪ್ರೀಂ ಕೋರ್ಟಿನಲ್ಲಿ ಅರ್ಜಿಗಳನ್ನು ಸಲ್ಲಿಸಿದ್ದರು..

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement